ದಡ್ಡಲಕಾಡು ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜನ್ಮದಿನಾಚರಣೆ

ಬಂಟ್ವಾಳ: ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜನ್ಮ ದಿನ ವನ್ನು ದಡ್ಡಲಕಾಡು ಸರಕಾರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ಆಚರಿಸಲಾಯಿತು.

ಶಾಲ ದತ್ತು ಸಂಸ್ಥೆ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಅಂಚನ್ ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ,‌ ದೀಪ ಪ್ರಜ್ವಲಿಸಿ ಮಾತನಾಡಿ ಬ್ರಹ್ಮಶ್ರೀ ನಾರಾಯಣ ಗುರುಗಳು ಕೇವಲ ಸಂತರಾಗಿ ಉಳಿಯದೆ ಸಮಾಜ ಸುಧಾರಣೆಯ ಮೂಲಕ ಅಂದಿನ ಕಾಲದಲ್ಲಿದ್ದ ಅನಿಷ್ಟ ಪದ್ದತಿಗಳ ವಿರುದ್ಧ ಹೋರಾಡಿದ ಶ್ರೇಷ್ಠ ದಾರ್ಶನಿಕರು. ಅವರ ಜೀವನ ಸಂದೇಶ ಇಂದಿಗೂ ಪ್ರಸ್ತುತವಾಗಿದ್ದು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸುವ ಮೂಲಕ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಗೌರವ ಸಲ್ಲಿಸಬೇಕು ಎಂದರು. ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ ಬಲಯುತರಾಗಿರಿ ಎನ್ನುವ ನಾರಾಯಣ ಗುರುಗಳ ವಾಣಿ ಶೋಷಿತರು,  ಹಿಂದುಳಿದ ವರ್ಗದವರು ಇಂದು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಲು ಶಕ್ತಿ ನೀಡಿದೆ ಎಂದು ತಿಳಿಸಿದರು. ಶಾಲಾಭಿವೃದ್ಧಿ ಸಮಿತಿ ಕಾರ್ಯಧ್ಯಕ್ಷ ಪುರುಷೋತ್ತಮ ಅಂಚನ್,  ಉಪಾಧ್ಯಕ್ಷ ಬಾಲಕೃಷ್ಣ ಜಿ, ಟ್ರಸ್ಟಿ ರಾಮಚಂದ್ರ ಪೂಜಾರಿ ಕರೆಂಕಿ ಮುಖ್ಯ ಶಿಕ್ಷಕ ರಮಾನಂದ, ಮೌರೀಸ್ ಡಿಸೋಜಾ ಹಾಗೂ ಸಹ ಶಿಕ್ಷಕಿಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ದಡ್ಡಲಕಾಡು ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜನ್ಮದಿನಾಚರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*