




ಬಂಟ್ವಾಳ: ವಾಮದಪದವಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪದವಿಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಖೋಖೋ ಪಂದ್ಯಾಟ ನಡೆಯಿತು. ಕಲ್ಲಡ್ಕ ಪಪೂ ಕಾಲೇಜು ತಂಡ ಪ್ರಥಮ, ವಿಠಲ ಪದವಿಪೂರ್ವ ಕಾಲೇಜು ದ್ವಿತೀಯ ಸ್ಥಾನಿಯಾಯಿತು. ಚೆನ್ನೈತೋಡಿ ಗ್ರಾಪಂ ಅಧ್ಯಕ್ಷೆ ಭಾರತಿ ರಾಜೇಂದ್ರ ಉದ್ಘಾಟಿಸಿ ಶುಭ ಹಾರೈಸಿದರು. ಬಂಟ್ವಾಳ ರೋಟರಿ ಟೌನ್ ಅಧ್ಯಕ್ಷ ಚಿತ್ತರಂಜನ್ ಶೆಟ್ಟಿ ಬೊಂಡಾಲ, ರಾಜ್ಯ ಒಳಚರಂಡಿ ಮಂಡಳಿ ನಿರ್ದೇಶಕಿ ಸುಲೋಚನಾ ಜಿ.ಕೆ. ಭಟ್, ವಾಮದಪದವು ವ್ಯ.ಸೇ.ಸಹಕಾರಿ ಬ್ಯಾಂಕ್ ಅಧ್ಯಕ್ಷ ಕಮಲ್ ಶೆಟ್ಟಿ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಚಂದ್ರಶೇಖರ ಶೆಟ್ಟಿ, ಸದಸ್ಯರು ಹಾಗೂ ಪ್ರಮುಖ ಗಣ್ಯರಾದ ನಾಗರಾಜ ಶೆಟ್ಟಿ, ಹಂಝ ಬಸ್ತಿಕೋಡಿ, ಪ್ರಭಾಕರ ಶೆಟ್ಟಿ, ಯಶೋಧರ ಶೆಟ್ಟಿ, ಪುರುಷೋತ್ತಮ ಶೆಟ್ಟಿ, ದಿನೇಶ್ ಶೆಟ್ಟಿ ದಂಬೆದಾರ್, ಪ್ರಕಾಶ್ ಶೆಟ್ಟಿ, ತಾಲೂಕು ಕ್ರೀಡಾ ಸಂಯೋಜಕ ಸಾಯಿರಾಮ್ ನಾಯಕ್ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.
Be the first to comment on "ವಾಮದಪದವಿನಲ್ಲಿ ತಾಲೂಕು ಮಟ್ಟದ ಪಪೂ ಕಾಲೇಜುಗಳ ಖೋಖೋ ಪಂದ್ಯಾಟ"