ಬಿ.ಸಿ.ರೋಡ್ ಶ್ರೀ ಚಂಡಿಕಾಪರಮೇಶ್ವರಿ ದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ವಿಜ್ಞಾಪನಾ ಪತ್ರ ಬಿಡುಗಡೆ

ಬಂಟ್ವಾಳ: ಬಿ.ಸಿ.ರೋಡಿನ ಹೃದಯಭಾಗದಲ್ಲಿರುವ ಚಂಡಿಕಾನಗರದ ಶ್ರೀ ಚಂಡಿಕಾಪರಮೇಶ್ವರಿ ದೇವಿ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಮಹೋತ್ಸವದ ಸಲುವಾಗಿ ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮ ದೇವಸ್ಥಾನದಲ್ಲಿ ಭಾನುವಾರ ನಡೆಯಿತು.

ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದಲ್ಲಿ ಶನಿವಾರ ಮತ್ತು ಭಾನುವಾರ ಹಲವು ವೈದಿಕ, ಧಾರ್ಮಿಕ ಕಾರ್ಯಕ್ರಮಗಳು ನಡೆದವು, ಮಧ್ಯಾಹ್ನ ವಿಜ್ಞಾಪನಾ ಪತ್ರವನ್ನು ತಂತ್ರಿಗಳು ಗಣ್ಯರ ಸಮ್ಮುಖ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭ ಮಾಜಿ ಸಚಿವ ಬಿ.ರಮಾನಾಥ ರೈ, ಉದ್ಯಮಿ ರಘುನಾಥ ಸೋಮಯಾಜಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಾಕೇಶ್ ಮಲ್ಲಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಲೋಕನಾಥ ಶೆಟ್ಟಿ, ಕಾರ್ಯದರ್ಶಿ ಇಂದ್ರೇಶ್, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಬಿ.ರಾಮಚಂದ್ರ ರಾವ್ ಉಪಸ್ಥಿತರಿದ್ದರು. ಜೀರ್ಣೋದ್ಧಾರ ಸಮಿತಿ ಜತೆ ಕಾರ್ಯದರ್ಶಿ ಐತಪ್ಪ ಪೂಜಾರಿ ವಂದಿಸಿದರು. ಮತ್ತೋರ್ವ ಜತೆ ಕಾರ್ಯದರ್ಶಿ ಮಂಜು ವಿಟ್ಲ ಕಾರ್ಯಕ್ರಮ ನಿರ್ವಹಿಸಿದರು.ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ, ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ, ಸದಸ್ಯರ ಸಹಿತ ಊರ ಪ್ರಮುಖರು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಬಿ.ಸಿ.ರೋಡ್ ಶ್ರೀ ಚಂಡಿಕಾಪರಮೇಶ್ವರಿ ದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ವಿಜ್ಞಾಪನಾ ಪತ್ರ ಬಿಡುಗಡೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*