ಶಾಲೆಯಲ್ಲೇ ಅಡಕೆ ಬೆಳೆದು ಮಕ್ಕಳಿಗಾಗಿ ಬಸ್ ಖರೀದಿಸಿದರು!!

ಹರೀಶ ಮಾಂಬಾಡಿ, ಬಂಟ್ವಾಳನ್ಯೂಸ್

ಬಂಟ್ವಾಳ: ತೋಟದಿಂದ ಬಂದ ಆರ್ಥಿಕ ಆದಾಯದಿಂದ ಸರ್ಕಾರಿ ಶಾಲೆಯೊಂದು ಬಸ್ ಖರೀದಿ ಮಾಡಿ ಗಮನ ಸೆಳೆದಿದೆ. ಮಿತ್ತೂರಿನಲ್ಲಿರುವ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅದರಿಂದ ಲಭ್ಯವಾದ ಆದಾಯದಿಂದ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗಲು ಬಸ್ ಖರೀದಿಸಿದೆ. ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೊಳಪಟ್ಟ ಈ ಶಾಲೆಗೆ ಆಗಮಿಸಿದ ಶಾಸಕ ಸಂಜೀವ ಮಠಂದೂರು ಬಸ್ ಗೆ ಚಾಲನೆ ನೀಡಿ, ಶಾಲೆಗೆ ಮತ್ತಷ್ಟು ನೆರವುಗಳನ್ನು ಘೋಷಿಸಿದರು.

ಶಾಲೆ ಸುಮಾರು 4.15 ಎಕರೆಯಷ್ಟು ಜಾಗವನ್ನು ಹೊಂದಿದ್ದು, ಅದರಲ್ಲಿ ಒಂದು ಎಕರೆಯಷ್ಟು ಪೂರ್ತಿ ಅಡಕೆ ತೋಟವನ್ನೇ ಹೊಂದಿದೆ. ಅಲ್ಲದೆ ಇತರೆಡೆಗಳಲ್ಲೂ ಅಡಕೆ ಗಿಡ ನೆಡಲಾಗಿದೆ. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಆದಂ ಮಿತ್ತೂರು ಅವರು ಇತರ ಎಸ್.ಡಿ.ಎಂ.ಸಿ. ಸದಸ್ಯರ ಜತೆಗೂಡಿ ಕೆಲ ವರ್ಷಗಳ ಹಿಂದೆ ಸ್ವತಃ ಧನಸಹಾಯ ಮಾಡುವ ಮೂಲಕ ಶಾಲಾಭಿವೃದ್ಧಿ ಜತೆಗೆ ಕೈತೋಟದ ಅಭಿವೃದ್ಧಿಗೆ ಕಾರ್ಯೋನ್ಮುಖರಾದರು. 2017ರಲ್ಲಿ ನೆಟ್ಟ 628 ಗಿಡಗಳು ಈಗ ಮರವಾಗಿವೆ. ಐದು ವರ್ಷಗಳ ಫಲವನ್ನು ಶಾಲಾ ಮಕ್ಕಳು ಪಡೆಯುತ್ತಿದ್ದಾರೆ ಎಂದು ಇಲ್ಲಿನ ಶಿಕ್ಷಕ ಸಂಜೀವ ಎನ್. ತಿಳಿಸಿದ್ದಾರೆ.

ಜಾಹೀರಾತು

ಕಳೆದ ವರ್ಷ ಅಡಕೆ ತೋಟ ಫಸಲು ನೀಡಲಾರಂಭಿಸಿತು. ಶಾಲೆಯ ಮೇಲೆ ಪ್ರೀತಿಯಿಟ್ಟ ಊರವರು ತೋಟವನ್ನು ನೋಡಿಕೊಳ್ಳುತ್ತಿದ್ದಾರೆ. ಇದರಿಂದಾಗಿ ಬಸ್ ಖರೀದಿಗೆ ನಿಧಿಸಂಚಯವಾಯಿತು ಎಂದು ಶಾಲೆ ಮುಖ್ಯೋಪಾಧ್ಯಾಯಿನಿ ಸರೋಜಾ ಎ.ತಿಳಿಸಿದರು.  ಸುತ್ತಮುತ್ತಲಿನ ಸುಮಾರು 118 ಮಕ್ಕಳು ಇಲ್ಲಿಗೆ ಆಗಮಿಸುತ್ತಿದ್ದಾರೆ. ಇರುವರೆಗೆ ಆಟೊಗಳಲ್ಲಿ ಬರುತ್ತಿದ್ದರು. ಇನ್ನು ಬಸ್ಸಿನಲ್ಲಿ ಎರಡು ಟ್ರಿಪ್ ಗಳನ್ನು ಮಾಡುವ ಮೂಲಕ ಬರಲು ಸಾಧ್ಯ. ಮೂರು ವರ್ಷಗಳ ಹಿಂದೆ ಎಸ್.ಡಿ.ಎಂ.ಸಿ.ಯೇ ಆಟೊ ರಿಕ್ಷಾ ಬಾಡಿಗೆ ಗೊತ್ತು ಮಾಡಿ ಮಕ್ಕಳನ್ನು ಕರೆತರುವ ವ್ಯವಸ್ಥೆ ಮಾಡಿತ್ತು. ಇದೀಗ ಸೆಕೆಂಡ್ ಹ್ಯಾಂಡ್ ಬಸ್ ಖರೀದಿಯಾಗಿದೆ. ಇದರ ಖರ್ಚುವೆಚ್ಚವನ್ನು ಪೋಷಕರು ಸಮಾನವಾಗಿ ಭರಿಸಲಿದ್ದಾರೆ ಎಂದು ಮುಖ್ಯೋಪಾಧ್ಯಾಯಿನಿ ಸರೋಜಾ ಹೇಳಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಶಾಲೆಯಲ್ಲೇ ಅಡಕೆ ಬೆಳೆದು ಮಕ್ಕಳಿಗಾಗಿ ಬಸ್ ಖರೀದಿಸಿದರು!!"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*