ಬಂಟ್ವಾಳ: ಪೊಳಲಿ ಪ್ರೌಢಶಾಲಾ ಮಕ್ಕಳಿಂದ ಗುರುವಂದನೆ ಹಿನ್ನೆಲೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ಹಳೆ ವಿದ್ಯಾರ್ಥಿಗಳ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಕ್ಕಳು ಹುಲಿವೇಷ ಹಾಕಿ ಭರ್ಜರಿ ಸ್ಟೆಪ್ ಹಾಕಿದ್ದು ವಿಶೇಷ.
ಶ್ರೀ ರಾಜರಾಜೇಶ್ವರಿ ಪ್ರೌಢಶಾಲೆ ಪೊಳಲಿಯಲ್ಲಿ ವಿದ್ಯಾರ್ಥಿಗಳು ಶಿಕ್ಷಕರಿಗಾಗಿ ಗುರುವಂದನಾ ಕಾರ್ಯಕ್ರಮ ನಡೆಸಿದರು. ಅನೇಕ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ವಿಶೇಷವಾಗಿ ಹಳೆ ವಿದ್ಯಾರ್ಥಿಗಳ ಸಹಯೋಗದಲ್ಲಿ ಹುಲಿವೇಷ ಗಮನ ಸೆಳೆಯಿತು. ಸಂಸ್ಥೆಯ ಸುಮಾರು 300 ವಿದ್ಯಾರ್ಥಿಗಳು ಪಾಲ್ಗೊಂಡರು ಸಂಸ್ಥೆಯ ಶಿಕ್ಷಕ ವರ್ಗ ಸಿಬ್ಬಂದಿ ವರ್ಗ ಹಾಜರಿದ್ದರು. ಮುಖ್ಯ ಶಿಕ್ಷಕರಾದ ರಾಧಾಕೃಷ್ಣ ಕೆ ಇವರು ಮಕ್ಕಳಿಗೆ ಶುಭ ಹಾರೈಸಿದರು.
Be the first to comment on "ಪೊಳಲಿ ಪ್ರೌಢಶಾಲಾ ಮಕ್ಕಳಿಂದ ಗುರುವಂದನೆ ಹಿನ್ನೆಲೆ ಸಾಂಸ್ಕೃತಿಕ ಕಾರ್ಯಕ್ರಮ: ಹುಲಿವೇಷ ಹಾಕಿ ಭರ್ಜರಿ ಸ್ಟೆಪ್"