ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮದ ಮಣಿನಾಲ್ಕೂರು ಸೇವಾ ಸಹಕಾರಿ ಸಂಘದ ಸರಪಾಡಿ ದಿ.ಸುಬ್ಬಣ್ಣ ಶೆಟ್ಟಿ ಸಭಾಂಗಣದಲ್ಲಿ ಶನಿವಾರ ಬಂಟ್ವಾಳ ತಹಸೀಲ್ದಾರ್ ಡಾ. ಸ್ಮಿತಾ ರಾಮು ಅವರು ಗ್ರಾಮವಾಸ್ತವ್ಯ ಕಾರ್ಯಕ್ರಮ ನಡೆಸಿದರು. ತಾಲೂಕು ಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳು ಗ್ರಾಮ ವಾಸ್ತವ್ಯದಲ್ಲಿ ಭಾಗವಹಿಸಿದ್ದು, ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ, ಕಾನೂನಿನ ಚೌಕಟ್ಟಿನೊಳಗೆ ಶೀಘ್ರ ಪರಿಹಾರ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ಈ ಸಂದರ್ಭ ಅವರು ಹೇಳಿದರು.
ಮಣಿನಾಲ್ಕೂರು ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಾಧಾಕೃಷ್ಣ ಮಯ್ಯ ಈ ಸಂದರ್ಭ ಮಾತನಾಡಿ, ಕಾರ್ಯಕ್ರಮ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಗ್ರಾ.ಪಂ.ಅಧ್ಯಕ್ಷೆ ಲೀಲಾವತಿ ಅಧ್ಯಕ್ಷತೆ ವಹಿಸಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಿಲ್ವಿಯಾ ಫೆರ್ನಾಂಡಿಸ್ ಉಪಸ್ಥಿತರಿದ್ದರು.
ಈ ಸಂದರ್ಭ ಪಿಂಚಣಿ ಯೋಜನೆ, ಭಾಗ್ಯಲಕ್ಷ್ಮಿ ಬಾಂಡ್ ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಕೇಂದ್ರ ಸ್ಥಾನೀಯ ಉಪತಹಸೀಲ್ದಾರ್ ನರೇಂದ್ರನಾಥ ಮಿತ್ತೂರು ಸಹಿತ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು. ಕಂದಾಯ ನಿರೀಕ್ಷಕರಾದ ಜನಾರ್ದನ ಸ್ವಾಗತಿಸಿದರು. ಉಪ ತಹಸೀಲ್ದಾರ್ ದಿವಾಕರ ಮುಗುಳ್ಯ ವಂದಿಸಿದರು.. ಉಪ ತಹಸೀಲ್ದಾರ್ ನವೀನ್ ಬೆಂಜನಪದವು ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಅಂಗವಾಗಿ ಸಂಘದ ಆವರಣದಲ್ಲಿ ತೆಂಗಿನ ಸಸಿ ನೆಡಲಾಯಿತು. ಬಳಿಕ ತಹಸೀಲ್ದಾರ್ ಅವರು ಪೆರ್ಲ-ಬೀಯಪಾದೆ ಪರಿಶಿಷ್ಠ ಕಾಲನಿಗೆ ಭೇಟಿ ನೀಡಿ ಅಹವಾಲು ಸ್ವೀಕರಿಸಿದರು.
Be the first to comment on "ಸರಪಾಡಿ ಗ್ರಾಮದಲ್ಲಿ ಬಂಟ್ವಾಳ ತಹಸೀಲ್ದಾರ್ ಗ್ರಾಮ ವಾಸ್ತವ್ಯ"