



ಬಂಟ್ವಾಳ: ಮಾಜಿ ಸಚಿವ ಬಿ.ರಮಾನಾಥ ರೈ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್, ಯುವ ಕಾಂಗ್ರೆಸ್ ಮತ್ತು ಅಲ್ಪಸಂಖ್ಯಾತ ಘಟಕ ವತಿಯಿಂದ ಕೆಎಂಸಿ ಸಹಯೋಗದೊಂದಿಗೆ ರಕ್ತದಾನ ಶಿಬಿರ ಮತ್ತು ಕಣ್ಣಿನ ತಪಾಸಣಾ ಶಿಬಿರ, ಕನ್ನಡಕ ವಿತರಣಾ ಕಾರ್ಯಕ್ರಮ ಬೈಪಾಸ್ ರಸ್ತೆಯ ಸಮಾಜ ಸೇವಾ ಸಹಕಾರಿ ಸಂಘದ ಹಾಲ್ ನಲ್ಲಿ ನಡೆಯಿತು.
ಮಾಜಿ ಸಚಿವ ಬಿ.ರಮಾನಾಥ ರೈ ಕೇಕ್ ಕತ್ತರಿಸಿ, ಸನ್ಮಾನ ಸ್ವೀಕರಿಸಿದರು. ಈ ಸಂದರ್ಭ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಶುಭ ಹಾರೈಸಿದರು. ಕೊಡಮಣಿತ್ತಾಯ ದೈವಸ್ಥಾನ ತಂತ್ರಿ ಗಣಪತಿ ಮುಚ್ಚಿನ್ನಾಯ, ಅಲ್ಲಿಪಾದೆ ಚರ್ಚ್ ಧರ್ಮಗುರು ವಂದನೀಯ ಫೆಡ್ರಿಕ್ ಮೊಂತೆರೊ, ಮಿತ್ತಬೈಲ್ ನ ಮಸೀದಿಯ ಇರ್ಷಾದ್ ಹುಸೈನ್ ದಾರಿಮಿ ಆಶೀರ್ವದಿಸಿದರು.
ಬ್ಲಾಕ್ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಜಿಪಂ ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ ಜೈನ್, ಎಂ.ಎಸ್.ಮಹಮ್ಮದ್, ಕಂಬಳ ಸಮಿತಿ ಅಧ್ಯಕ್ಷ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಮಾಜಿ ಸದಸ್ಯ ಪಿಯೂಸ್ ಎಲ್. ರೋಡ್ರಿಗಸ್, ಬಂಟ್ವಾಳ ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಜೋರ, ಅಲ್ಪಸಂಖ್ಯಾತ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಶರೀಫ್, ಪಾಣೆಮಂಗಳೂರು ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಜ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಲವಿನಾ ವಿಲ್ಮಾ ಮೋರಾಸ್, ಜಯಂತಿ ಪೂಜಾರಿ, ಕೆಪಿಸಿಸಿ ಸಂಯೋಜಕ ಚಿತ್ತರಂಜನ್ ಶೆಟ್ಟಿ ಬೊಂಡಾಲ, ಗೇರು ನಿಗಮದ ಮಾಜಿ ಅಧ್ಯಕ್ಷ ಬಿ.ಎಚ್.ಖಾದರ್, ತಾಪಂ ಮಾಜಿ ಅಧ್ಯಕ್ಷ ಪದ್ಮನಾಭ ರೈ, ಮಾಜಿ ಉಪಾಧ್ಯಕ್ಷ ಅಬ್ಬಾಸ್ ಆಲಿ, ಭೂ ಅಭಿವೃದ್ಧಿ ಬ್ಯಾಂಕ್ ಮಾಜಿ ಅಧ್ಯಕ್ಷ ಸುದರ್ಶನ್ ಜೈನ್, ಪ್ರಮುಖರಾದ ಮಾಯಿಲಪ್ಪ ಸಾಲ್ಯಾನ್, ರಮೇಶ್ ನಾಯಕ್ ರಾಯಿ, ಸದಾನಂದ ಶೆಟ್ಟಿ, ಮನೋಹರ್ ನೇರಂಬೋಳು, ಅಣ್ಣು ಖಂಡಿಗ, ಪಿ.ಎ.ರಹೀಂ, ಸಂಪತ್‌ಕುಮಾರ್ ಶೆಟ್ಟಿ, ಕಾಂಚಲಾಕ್ಷಿ, ಮೋಹನ ಗೌಡ, ಸಹಿತ ವಿವಿಧ ಘಟಕಗಳ ಮುಖಂಡರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು. ಎಚ್ಕೆ ನಯನಾಡು ಕಾರ್ಯಕ್ರಮ ನಿರ್ವಹಿಸಿದರು. ಈ ಸಂದರ್ಭ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ನೇತ್ರದಾನದ ಘೋಷಣೆ ಮಾಡಿದರು.
Be the first to comment on "ರೈ ಹುಟ್ಟುಹಬ್ಬ: ಬಂಟ್ವಾಳದಲ್ಲಿ ರಕ್ತದಾನ, ನೇತ್ರ ತಪಾಸಣೆ, ಕನ್ನಡಕ ವಿತರಣೆ"