ಮಾಣಿಲದಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಚಾಲನೆ

This image has an empty alt attribute; its file name is SAMBHRAMA-ELECTRONICS-723x1024.jpeg
This image has an empty alt attribute; its file name is WhatsApp-Image-2022-08-25-at-7.55.14-AM-1-1024x1024.jpeg

ಭಕ್ತಿ ಶ್ರದ್ದೆಯಿಂದ ಮಾಡಿದ ಕಾರ್ಯದಲ್ಲಿ ಫಲ ಹೆಚ್ಚು. ಇತರರ ಮನಸ್ಸಿಗೆ ನೋವುಂಟು ಮಾಡದೆ ಎಲ್ಲರನ್ನೂ ಪ್ರೀತಿಸುವ ಮನಸ್ಸು ನಮ್ಮದಾಗಬೇಕು.ನವರಾತ್ರಿ ಸಂದರ್ಭನವದುರ್ಗೆಯರ ಆರಾಧನೆಯಿಂದ ನಿಮ್ಮೆಲ್ಲರ ಕಷ್ಟಗಳೆಲ್ಲೂ ದೂರವಾಗಲಿ. ನವದುರ್ಗೆಯರು ಎಲ್ಲರಿಗೂ ಒಳಿತು ಮಾಡಲಿ ಎಂದು ಶ್ರೀಧಾಮ ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.

ಅವರು ಕ್ಷೇತ್ರದಲ್ಲಿ ಸೆ.26ರಿಂದ ಅ.6ರ ವರೆಗೆ ನಡೆಯಲಿರುವ ಶರನ್ನವರಾತ್ರಿ ಮಹೋತ್ಸವಕ್ಕೆ  ಚಾಲನೆ ನೀಡಿ, ಕೊಪ್ಪರಿಗೆ ಮುಹೂರ್ತ ನಡೆಸಿ  ಆಶೀರ್ವಚನ ನೀಡಿದರು.

ಸೆ.26ರಂದು ಬೆಳಗ್ಗೆ ಗಣಪತಿಹೋಮ ನಡೆದು ಕೊಪ್ಪರಿಗೆ ಮುಹೂರ್ತ ನಡೆಯಿತು. ದೇವತಾ ಕಾರ್ಯಕ್ರಮಗಳು ಬಳಿಕ ಚಂಡಿಕಾಯಾಗ, ಭಜನಾ ಸಂಕೀರ್ತನೆ, ಸಾಮೂಹಿಕ ಕುಂಕುಮಾರ್ಚನೆ ನಡೆದು ಮಹಾಪೂಜೆಯ ಬಳಿಕ ಅನ್ನ ಸಂತರ್ಪಣೆ ನಡೆಯಿತು. ಟ್ರಸ್ಟಿ ತಾರನಾಥ ಕೊಟ್ಟಾರಿ, ಮಂಜು ವಿಟ್ಲ, ರಮೇಶ್ ಪನೊಳಿಬೈಲು, ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಮಾಣಿಲದಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಚಾಲನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*