ಬಂಟ್ವಾಳ

ನಿವೃತ್ತಿ ಹಾಗೂ ಪದೋನ್ನತಿ ಹೊಂದಿದ ಬಂಟ್ವಾಳ ಕಂದಾಯ ಅಧಿಕಾರಿಗಳಿಗೆ ಬೀಳ್ಕೊಡುಗೆ

ಬಂಟ್ವಾಳ: ಬಂಟ್ವಾಳ ತಾಲೂಕು ಆಡಳಿತ ಸೌಧದ ಕಂದಾಯ ಇಲಾಖೆಯಲ್ಲಿ ಡಿ ಗ್ರೂಪ್ ನೌಕರರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಪಿ.ಸಿ. ಥೋಮಸ್ ಹಾಗೂ ಪದೋನ್ನತಿ ಹೊಂದಿದ ಕಂದಾಯಾಧಿಕಾರಿಗಳಿಗೆ ಬೀಳ್ಕೊಡುಗೆ ಸಮಾರಂಭ ಬಿ.ಸಿ.ರೋಡಿನ ಸರ್ಕಾರಿ ನೌಕರರ ಸಭಾಭವನದಲ್ಲಿ ತಹಸೀಲ್ದಾರ್ ಡಾ. ಸ್ಮಿತಾ ರಾಮು ಅಧ್ಯಕ್ಷತೆಯಲ್ಲಿ ನಡೆಯಿತು. ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಉಮಾನಾಥ ರೈ ಮೇರಾವು ಶುಭ ಹಾರೈಸಿದರು.

ಡಿ ಗ್ರೂಪ್ ನೌಕರರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಪಿ.ಸಿ. ಥೋಮಸ್,  ಪದೋನ್ನತಿ ಹೊಂದಿದ ರೇಖಾ ಎಂ, ಕುಮಾರ್ ಟಿ.ಸಿ., ಪ್ರಕಾಶ್ ಪಿ, ಪ್ರಶಾಂತ್ ಟಿ ಎಸ್, ಶಶಿಕುಮಾರ್, ಸುರೇಶ್, ಮಹೇಂದ್ರ, ಪವಿತ್ರ, ರಾಜು ಲಮಾಣಿ ಅನುಭವಗಳನ್ನು ಹಂಚಿಕೊಂಡರು.

ಈ ಸಂದರ್ಭ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಸಂತೋಷ್, ಕೇಂದ್ರ ಸ್ಥಾನೀಯ ಶಿರಸ್ತೇದಾರ್ ನರೇಂದ್ರನಾಥ ಮಿತ್ತೂರು, ಉಪತಹಸೀಲ್ದಾರರಾದ ರಾಜೇಶ್ ನಾಯ್ಕ್, ದಿವಾಕರ ಮುಗುಳ್ಯ, ವಿಜಯ್ ವಿಕ್ರಮ್, ಉಪನೋಂದಣಾಧಿಕಾರಿ ಕವಿತಾ, ಕಂದಾಯ ನಿರೀಕ್ಷಕರಾದ ವಿಜಯ್ ಆರ್,  ತಾಲೂಕು ಕಚೇರಿ ಸಿಬ್ಬಂದಿ ವರ್ಗ, ಗ್ರಾಮಕರಣಿಕರು, ಗ್ರಾಮ ಸಹಾಯಕರು ಹಾಜರಿದ್ದರು.

ಜಾಹೀರಾತು

ಗ್ರಾಮ ಲೆಕ್ಕಾಧಿಕಾರಿ ಅಮೃತಾಂಶು ಪ್ರಾರ್ಥನೆ ಹಾಡಿದರು. ಉಪತಹಸೀಲ್ದಾರ್ ನವೀನ್  ಬೆಂಜನಪದವು ಕಾರ್ಯಕ್ರಮ ನಿರೂಪಿಸಿದರು. ವಿಟ್ಲ ಹೋಬಳಿ ಕಂದಾಯ ನಿರೀಕ್ಷಕರಾದ ಪ್ರಶಾಂತ್ ಶೆಟ್ಟಿ ಸ್ವಾಗತಿಸಿದರು. ಬಂಟ್ವಾಳ ಹೋಬಳಿ ಕಂದಾಯ ನಿರೀಕ್ಷಕರಾದ ಜನಾರ್ಧನ್. ಜೆ ವಂದಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts