ಬಂಟ್ವಾಳ: ಮೂಡುಬಿದಿರೆಯ ಆಳ್ವಾಸ್ ನಲ್ಲಿ ಡಿ.21ರಿಂದ 27ರವರೆಗೆ ನಡೆಯಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯ ಬಗ್ಗೆ ಚರ್ಚಿಸಲು ಬಂಟ್ವಾಳ ತಾಲೂಕಿನ ಪೂರ್ವಸಿದ್ಧತಾ ಸಭೆ ಬಿ.ಸಿ.ರೋಡಿನ ಹೋಟೆಲ್ ರಂಗೋಲಿ ಸಭಾಂಗಣದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ತಾಲೂಕು ಘಟಕಗಳು ಮತ್ತು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ನಡೆಯಿತು.
ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ತಾಲೂಕಿನ ಎಲ್ಲ ಗಣ್ಯರೂ ನೆರವು ನೀಡಿ ಯಶಸ್ಸಿಗೆ ಸಹಕರಿಸಬೇಕು ಎಂದು ವಿನಂತಿಸಿದರು. ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಹಾಗೂ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಧಾನ ಆಯುಕ್ತ ಡಾ. ಎಂ.ಮೋಹನ ಆಳ್ವ ಅವರು ಜಾಂಬೂರಿಯ ವಿವರಗಳನ್ನು ನೀಡಿದರು. ಮಾಜಿ ಶಾಸಕ ರಮಾನಾಥ ರೈ, ರಾಜ್ಯ ಸ್ಕೌಟ್ ಮತ್ತು ಗೈಡ್ಸ್ ಪ್ರಧಾನ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ತಾಲೂಕು ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಮಾತನಾಡಿದರು. ವೇದಿಕೆಯಲ್ಲಿ ಪ್ರಮುಖರಾದ ಎ.ಸಿ.ಭಂಡಾರಿ, ಜಗನ್ನಾಥ ಚೌಟ, ಡಾ. ವಸಂತ ಬಾಳಿಗಾ, ಪ್ರಹ್ಲಾದ್ ಶೆಟ್ಟಿ, ಸ್ಕೌಟ್ಸ್ ನ ಎಸ್.ಒ.ಸಿ. ಪ್ರಭಾಕರ ಭಟ್, ತಾಲೂಕು ಸ್ಕೌಟ್ ಗೈಡ್ಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು. ಬಂಟ್ವಾಳ ಸ್ಥಳೀಯ ಸಂಸ್ಥೆ ಅಧ್ಯಕ್ಷ ಬಿ.ಎಂ.ತುಂಬೆ ಸ್ವಾಗತಿಸಿದರು. ಕೋಶಾಧಿಕಾರಿ ಐತಪ್ಪ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು. ಒಕ್ಕೂಟ ಕಾರ್ಯದರ್ಶಿ ಜಯಂತ ನಾಯಕ್ ವಂದಿಸಿದರು.