ಕಳೆದ ೨೫ ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿರುವ ನಮ್ಮ ಬಂಟ್ವಾಳ ಸಮೂಹ ಸಂಸ್ಥೆಗಳ ರಜತ ಸಂಭ್ರಮದ ಸವಿನೆನಪಿಗಾಗಿ ನೂತನ ತಂತ್ರಜ್ಞಾನದೊಂದಿಗೆ ಸಿದ್ಧಗೊಂಡ ನಮ್ಮ ನ್ಯೂಸ್ ಚಾನೆಲ್ ಅ. 14ರಂದು ಬಿ.ಸಿ.ರೋಡು ಕಳ್ಳಿಮಾರ್ ಬಳಿ ನವೀಕೃತ ಕಟ್ಟಡದಲ್ಲಿ ಹೊಸ ತಾಂತ್ರಿಕ ವಿನ್ಯಾಸದ ಸ್ಟುಡಿಯೋದೊಂದಿಗೆ ಶುಭಾರಂಭಗೊಂಡಿತು.
ಸಜೀಪ ಮಾಗಣೆಯ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್ ಅವರು ದೀಪ ಬೆಳಗಿಸಿದರು. ಕಾರ್ಯಕ್ರಮಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಶುಭಹಾರೈಸಿ, ಮಾಧ್ಯಮ ಕ್ಷೇತ್ರದಲ್ಲಿ ಯಶಸ್ವಿಯಾಗಿ ಸಾಧನೆ ಮಾಡಿರುವ ನಮ್ಮ ಬಂಟ್ವಾಳ ಸಂಸ್ಥೆಗೆ ಇದೀಗ ಹೊಸ ನಮ್ಮ ನ್ಯೂಸ್ ಚಾನೆಲ್ ಆರಂಭಗೊಳ್ಳುತ್ತಿದ್ದು, ಇದು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ. ಎರಡು ಜಿಲ್ಲೆಗಳಿಗೆ ನಿರಂತರವಾಗಿ ದಿನದ ೨೪ ಗಂಟೆಗಳ ಕಾಲ ಸುದ್ದಿಯನ್ನು ನೀಡುವ ಮೂಲಕ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಬೆಳೆಯಲಿ ಎಂದು ಹಾರೈಸಿದರು.
ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ, ಬಂಟ್ವಾಳ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಅಧ್ಯಕ್ಷ ಬೇಬಿ ಕುಂದರ್, ಬೂಡಾ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಬಂಟ್ವಾಳ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಪ್ರೊ| ತುಕರಾಮ್ ಪೂಜಾರಿ, ನಿವೃತ್ತ ಶಿಕ್ಷಕ ರಾಮಚಂದ್ರ ರಾವ್ ಮೊದಲಾದವರು ಹಾರೈಸಿದರು. ಉದ್ಘಾಟನೆಯ ವೇಳೆ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ, ನ್ಯಾಯವಾದಿ ಪ್ರಸಾದ್‌ಕುಮಾರ್ ರೈ, ವಿವಿಧ ಗಣ್ಯರಾದ ಭಾಸ್ಕರ ರೈ ಕಟ್ಟ, ಪ್ರಭಾಕರ ಪ್ರಭು ಮೊದಲಾದ ಗಣ್ಯರು ಉಪಸ್ಥಿತರಿದ್ದರು. ಆಗಮಿಸಿದ ಅತಿಥಿಗಳನ್ನು ಸಂಸ್ಥೆಯ ಮುಖ್ಯಸ್ಥ ಪ್ರಶಾಂತ್ ಪುಂಜಾಲಕಟ್ಟೆ ದಂಪತಿ ಗೌರವಿಸಿದರು. ಪತ್ರಕರ್ತ ಮೌನೇಶ್ ವಿಶ್ವಕರ್ಮ ಕಾರ್ಯಕ್ರಮ ನಿರ್ವಹಿಸಿದರು.