ಫರಂಗಿಪೇಟೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕಾರು ಅಡ್ಡಗಟ್ಟಿ ಬೆದರಿಕೆ: ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಅಡ್ಡಗಟ್ಟಿ ಜೀವಬೆದರಿಕೆ ಹಾಕಿದ ಘಟನೆ ಫರಂಗಿಪೇಟೆ ಎಂಬಲ್ಲಿ ನಡೆದಿದ್ದು, ಈ ಕುರಿತು ಆರೋಪದಂತೆ ಪ್ರಕರಣ ದಾಖಲಾಗಿದೆ.

ರಾತ್ರಿ 11.30ರ ವೇಳೆಗೆ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ ಅಲ್ಲಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಶಾಸಕ ಹರೀಶ್ ಪೂಂಜಾ ಅವರು ತನ್ನ ಕಾರು ಬಿಟ್ಟು ಸಂಬಂಧಿಯೋರ್ವರ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅವರನ್ನು ದುಷ್ಕರ್ಮಿಗಳು ಪಡೀಲ್ ನಿಂದ ಫರಂಗಿಪೇಟೆಯವರೆಗೆ ಬೆನ್ನಟ್ಟಿದ್ದಾರೆ. ಬಳಿಕ ಫರಂಗಿಪೇಟೆ ಯಲ್ಲಿ ಕಾರು ಅಡ್ಡಗಟ್ಟಿ, ಬೈದು ಆಯುಧ ತೋರಿಸಿ,ಬೆದರಿಕೆ  ಹಾಕಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಗೆ ಶಾಸಕ ಪೂಂಜಾ ಕಾರು ಚಾಲಕ ನವೀನ್ ದೂರು ನೀಡಿದಂತೆ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ