ಬಂಟ್ವಾಳ: ಶಾಸಕ ಹರೀಶ್ ಪೂಂಜಾ ಅವರ ಕಾರನ್ನು ಅಡ್ಡಗಟ್ಟಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ಹೇಳಿದ್ದಾರೆ.
ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಶುಕ್ರವಾರ ರಾತ್ರಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಮಂಗಳೂರು ಫಳ್ನೀರು ನಿವಾಸಿ ರಿಯಾಜ್ (38) ಎಂಬಾತನನ್ನು ಬಂಧಿಸಲಾಗಿದ್ದು, ಘಟನೆಗೆ ಸಂಬಂಧಿಸಿ ವಾಹನವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಇದುವರೆಗೂ ಇರಲಿಲ್ಲ ಹಾಗೂ ಯಾವುದೇ ಆಯುಧಗಳು ಆತನ ಬಳಿ ಇರಲಿಲ್ಲ. ರಸ್ತೆಯಲ್ಲಿ ವಾಹನ ಓವರ್ ಟೇಕ್ ಮಾಡುವ ಸಂದರ್ಭದ ಜಗಳ ಘಟನೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದ್ದು, ಮತ್ತಷ್ಟು ತನಿಖೆ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಗುರುವಾರ ರಾತ್ರಿ ಸುಮಾರು 11.15ಕ್ಕೆ ಘಟನೆ ನಡೆದಿದ್ದು, ಪೂಂಜಾ ಚಾಲಕ ದೂರಿನಂತೆ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ಘಟನೆ ನಡೆದಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಶಾಸಕ ಪೂಂಜ ಕಾರು ಅಡ್ಡಗಟ್ಟಿ ಬೆದರಿಕೆ ಪ್ರಕರಣ: ಆರೋಪಿ ವಶಕ್ಕೆ – ಎಸ್ಪಿ ಋಷಿಕೇಶ್ ಭಗವಾನ್ ಸೋನಾವಣೆ"
Be the first to comment on "ಶಾಸಕ ಪೂಂಜ ಕಾರು ಅಡ್ಡಗಟ್ಟಿ ಬೆದರಿಕೆ ಪ್ರಕರಣ: ಆರೋಪಿ ವಶಕ್ಕೆ – ಎಸ್ಪಿ ಋಷಿಕೇಶ್ ಭಗವಾನ್ ಸೋನಾವಣೆ"