ಮನಪಾ ಸದಸ್ಯೆ ಪ್ರತಿಭಾ ಕುಳಾಯಿ ಮನೆಗೆ ಅವರು ಇಲ್ಲದೇ ಇದ್ದಾಗ ಪೊಲೀಸರು ಮಧ್ಯರಾತ್ರಿ ವೇಳೆ ಹೋಗಿರುವುದು ಸರಿಯಾದ ಕ್ರಮವಲ್ಲ, ಆ ಹೊತ್ತಿನಲ್ಲಿ ಹೋಗಿ ಕಿರುಕುಳ ನೀಡುವ ಅವಶ್ಯಕತೆ ಇರಲಿಲ್ಲ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದ್ದು, ಇದು ಹೋರಾಟಗಾರರ ಧ್ವನಿ ಅಡಗಿಸುವ ಕೆಲಸ ಮಾಡಲಾಗುತ್ತಿದೆ. ಈ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಳ್ಳುವ ಅಗತ್ಯ ಇದೆ ಎಂದು ಹೇಳಿದ್ದಾರೆ. ಇದು ಪ್ರತಿಭಟನಾಕಾರರನ್ನು ಹತ್ತಿಕ್ಕುವ ಕಾರ್ಯವಾಗಿದ್ದು, ಹೋರಾಟಗಾರರು ತಮ್ಮ ಸ್ವಾರ್ಥಕ್ಕಾಗಿ ಮಾಡುತ್ತಿಲ್ಲ. ಜನಸಾಮಾನ್ಯರಿಗಾಗಿ ಮಾಡುತ್ತಿದ್ದಾರೆ ಎಂದು ಹೇಳಿದ ರೈ, ಸಂಘಟನೆ ಸದಸ್ಯರು ಎಲ್ಲರೂ ಇದನ್ನು ಖಂಡಿಸಬೇಕು ಎಂದರು. ಪೊಲೀಸ್ ಇಲಾಖೆ ಕೈಗೊಂಡ ಕ್ರಮ ದಬ್ಬಾಳಿಕೆ ಕ್ರಮವಾಗಿದೆ, ಪ್ರತಿಭಟನಾಕಾರರ ಹಕ್ಕು ಕಿತ್ತುಕೊಳ್ಳುವ ಕೆಲಸವಾಗುತ್ತಿದೆ ಎಂದರು.
About the Author
Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to comment on "ಟೋಲ್ ಗೇಟ್ ವಿರುದ್ಧ ಹೋರಾಟ ನಡೆಸುವವರನ್ನು ಹತ್ತಿಕ್ಕುವ ಕೆಲಸ ಸರಿಯಲ್ಲ: ಮಾಜಿ ಸಚಿವ ರಮಾನಾಥ ರೈ"