ಜೋಡುಮಾರ್ಗ ಜೇಸಿಯ ಶ್ರೀನಿಧಿ ಭಟ್ ಅವರಿಗೆ ಉದ್ಯಮರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜೇಸಿ ಬೆಳ್ಮಣ್ಣು ಆಶ್ರಯದಲ್ಲಿ ನಡೆದ ಜೇಸಿಐ 15 ರ ವ್ಯವಹಾರ ವಿಭಾಗದ ಸಮ್ಮೇಳನದಲ್ಲಿ ಜೆಸಿಐ ಜೋಡುಮಾರ್ಗ ನೇತ್ರಾವತಿ ಪೂರ್ವಾಧ್ಯಕ್ಷ ಶ್ರೀನಿಧಿ ಭಟ್ ಉದ್ಯಮ ಕ್ಷೇತ್ರದ ಸಾಧನೆ ಗುರುತಿಸಿ ಪ್ರತಿಷ್ಠಿತ ಉದ್ಯಮ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಇವರು ಬಿ.ಸಿ.ರೋಡಿನಲ್ಲಿ ಸಪ್ತಶ್ರೀ ಕನ್ಸ್ಟ್ರಕ್ಷನ್ ಸಂಸ್ಥೆ ಮೂಲಕ ಕಟ್ಟಡ ನಿರ್ಮಾಣ ಕಾರ್ಯನಿರ್ವಹಿಸುತ್ತಿದ್ದು ಗುಣಮಟ್ಟದ ಕಾಮಗಾರಿಯ ಮೂಲಕ ಗುರುತಿಸಲ್ಪಟ್ಟಿದ್ದಾರೆ. ವಿವಿಧ ಸ್ಥಳೀಯ ಸಂಸ್ಥೆಗಳಲ್ಲಿ ಸಾಮಾಜಿಕ ಸೇವೆಯಲ್ಲಿ ಸೇವೆ ಸಲ್ಲಿಸುತ್ತಿರುವ ಇವರು ಉತ್ತಮ ಗಾಯಕರು ಆಗಿದ್ದಾರೆ. ಪ್ರಶಸ್ತಿ ಸ್ವೀಕರಿಸುವ ಸಂದರ್ಭ ವಲಯಾಧ್ಯಕ್ಷ ರಾಯನ್ ಉದಯ ಕ್ರಾಸ್ತಾ, ಪುರುಷೋತ್ತಮ ಶೆಟ್ಟಿ, ಸೌಮ್ಯ ರಾಕೇಶ್, ಜೆಸಿಐ ಜೋಡುಮಾರ್ಗ ನೇತ್ರಾವತಿ ಯ ಸದಸ್ಯರು ಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಜೋಡುಮಾರ್ಗ ಜೇಸಿ ಘಟಕದ ಶ್ರೀನಿಧಿ ಭಟ್ ಅವರಿಗೆ ಉದ್ಯಮರತ್ನ ಪ್ರಶಸ್ತಿ ಪ್ರದಾನ"
Be the first to comment on "ಜೋಡುಮಾರ್ಗ ಜೇಸಿ ಘಟಕದ ಶ್ರೀನಿಧಿ ಭಟ್ ಅವರಿಗೆ ಉದ್ಯಮರತ್ನ ಪ್ರಶಸ್ತಿ ಪ್ರದಾನ"