ಬಂಟ್ವಾಳ: ಬೆಂಗಳೂರಿನಲ್ಲಿ ಡಿ.19ರಂದು ನಡೆಯಲಿರುವ ಮಾಡು ಇಲ್ಲವೇ ಮಡಿ ಅನಿರ್ದಿಷ್ಟಾವಧಿ ಹೋರಾಟಕ್ಕೆ ಬೆಂಬಲ ಸೂಚಕವಾಗಿ ನಡೆಯುತ್ತಿರುವ ಒಪಿಎಸ್ ಸಂಕಲ್ಪ ಯಾತ್ರೆ ಬಿ.ಸಿ.ರೋಡಿನ ಮಿನಿ ವಿಧಾನಸೌಧ ಮುಂಭಾಗ ಆಗಮಿಸಿತು.
ಕರ್ನಾಟಕ ರಾಜ್ಯ ಸರಕಾರಿ ಎನ್.ಪಿ.ಎಸ್. (ನಾನ್ ಪೆನ್ಶನ್ ಸ್ಕೀಮ್) ನೌಕರರ ಸಂಘದ ತಾಲೂಕು ಘಟಕದಿಂದ ಯಾತ್ರೆಗೆ ಸ್ವಾಗತ ಕೋರಲಾಯಿತು.
ನಿಶ್ಚಿತ ಪಿಂಚಣಿ ಬೇಕು ಎಂಬ ಉದ್ದೇಶದೊಂದಿಗೆ ಈ ಹೋರಾಟ ನಡೆಯುತ್ತಿದ್ದು, ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್. ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶಾಂತರಾಮ್ ಯಾತ್ರೆ ಕುರಿತು ವಿವರಿಸಿದರು. ಈ ಸಂದರ್ಭ ಪ್ರಧಾನ ಕಾರ್ಯದರ್ಶಿ ನಾಗನಗೌಡ, ಹಿರಿಯ ಉಪಾಧ್ಯಕ್ಷ ಸಿದ್ದಪ್ಪ ಸಂಗಣ್ಣನವರ, ಉಪಾಧ್ಯಕ್ಷ ಚಂದ್ರಕಾಂತ ತಳವಾರ,ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್. ನೌಕರರ ಸಂಘದ ತಾಲೂಕು ಅಧ್ಯಕ್ಷ ಸಂತೋಷ್ ಕುಮಾರ್ ತುಂಬೆ, ಗೌರವ ಸಲಹೆಗಾರರಾದ ಪ್ರಶಾಂತ್ ಪೈ, ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್. ಸಂಘದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಇಬ್ರಾಹಿಂ, ಕಾರ್ಯದರ್ಶಿ ಆದರ್ಶ್, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ತಾಲೂಕು ಘಟಕದ ಅಧ್ಯಕ್ಷರಾದ ಉಮಾನಾಥ ರೈ ಮೇರಾವು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ, ಉಪಾಧ್ಯಕ್ಷರಾದ ನವೀನ್ ಪಿ ಎಸ್, ಪ್ರೌಢಶಾಲಾ ಸಹಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷರಾದ ಜೋಯೆಲ್ ಲೋಬೋ, ಜತೆ ಕಾರ್ಯದರ್ಶಿ ಶಶಿಕಾಂತ್,ಪ್ರಾಥಮಿಕ ಶಾಲಾ ಸಹಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷರಾದ ಜಯರಾಮ್, ಕಾರ್ಯದರ್ಶಿ ಯತೀಶ್, ಕರ್ನಾಟಕ ರಾಜ್ಯ ಸರ್ಕಾರಿ ಕಂದಾಯ ನೌಕರರ ಸಂಘದ ತಾಲೂಕು ಅಧ್ಯಕ್ಷರಾದ ಪ್ರಕಾಶ್ ಪಿ, ಗೌರವಾಧ್ಯಕ್ಷರಾದ ರಾಜೇಶ್ ನಾಯ್ಕ್, ಕರ್ನಾಟಕ ರಾಜ್ಯ ಗ್ರಾಮಲೆಕ್ಕಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷರಾದ ಜೆ ಜನಾರ್ಧನ, ತಾಲೂಕು ಅಧ್ಯಕ್ಷರಾದ ಅನಿಲ್ ಕುಮಾರ್, ಉಪಾಧ್ಯಕ್ಷರಾದ ಕರಿಬಸಪ್ಪ ನಾಯಕ್, ಮೆಸ್ಕಾಂ ಇಲಾಖೆಯ ಪ್ರಮುಖರು ಹಾಗೂ ಆರೋಗ್ಯ ಇಲಾಖೆಯ ಸಂಘದ ಪ್ರಮುಖರು ಉಪಸ್ಥಿತರಿದ್ದರು.