ಬಂಟ್ವಾಳ: ಇಲ್ಲಿಯ ನಗರ ಪೊಲೀಸ್ ಠಾಣಾ ವ್ಯಾಪ್ರಿಯಲ್ಲಿ 2007 ರಲ್ಲಿ ನಡೆದ ಕೊಲೆಯತ್ನ ಪ್ರಕರಣವೊಂದರಲ್ಲಿ ತಲೆಮರೆಸಿದ್ದ ಆರೋಪಿಯೋರ್ವನನ್ನು ಕೇರಳದ ಬಂದ್ಯೋಡು ಎಂಬಲ್ಲಿ ಬಂಟ್ವಾಳ ನಗರ ಪೊಲೀಸರು ಬಂಧಿಸಿ ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು ಮಂಜೇಶ್ವರ ಕುಂಜತ್ತೂರು ಗ್ರಾಮದ ತೂಮಿನಾಡು ನಿವಾಸಿ ಯಾಕುಬ್ ಎಂಬವರ ಪುತ್ರ ಮಹಮ್ಮದ್ ಫಾರೂಕ್ ಯಾನೆ ಫಾರೂಕ್ ಎಂದು ಹೆಸರಿಸಲಾಗಿದೆ.ಬುಧವಾರ ಆರೋಪಿಯ ಬಗ್ಗೆ ಖಚಿತ ಮಾಹಿತಿಯನ್ನಾಧರಿಸಿ ಅಲ್ಲಿನ ಪೊಲೀಸರ ಸಹಕಾರದಲ್ಲಿ ಬಂಟ್ವಾಳ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಫಾರೂಕ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…