
ಬಂಟ್ವಾಳ: ಬಂಟ್ವಾಳ ಸಮೀಪ ಶುಕ್ರವಾರ ಬೆಳಗ್ಗೆ ನಡೆದ ಅಪಘಾತದಲ್ಲಿ ಕಾರಿಗೆ ಬಸ್ ಡಿಕ್ಕಿಯಾಗಿ ಮೆಸ್ಕಾಂ ವಿಟ್ಲದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರವೀಣ್ ಜೋಷಿ ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎರಡು ಕಾರು ಹಾಗೂ ಬಸ್ ಗಳ ನಡುವೆ ಅಪಘಾತ ನಡೆದಿದೆ. ಒಂದು ಕಾರಿನಲ್ಲಿದ್ದ ವಿಟ್ಲ ಮೆಸ್ಕಾಂ ಎಇಇಪ್ರವೀಣ್ ಜೋಷಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇನ್ನೊಂದು ಕಾರಿನಲ್ಲಿದ್ದ ನಾಲ್ವರು ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಬಂಟ್ವಾಳ ಕಡೆಯಿಂದ ವಗ್ಗ ಕಡೆಗೆ ಹೋಗುತ್ತಿದ್ದ ಬ್ರಿಝಾ ಕಾರು, ವಗ್ಗದ ಮದ್ವದಲ್ಲಿ ತನ್ನ ಮನೆಯಿಂದ ಬರುತ್ತಿದ್ದ ಮೆಸ್ಕಾಂನ ಪ್ರವೀಣ್ ಜೋಷಿ ಅವರ ಕಾರುಗಳ ನಡುವೆ ಅಪಘಾತ ಸಂಭವಿಸಿತು, ಹಿಂಬದಿಯಿಂದ ಬಂದ ಬಸ್ ಕಾರುಗಳಿಗೆ ಡಿಕ್ಕಿ ಹೊಡೆದಿದೆ. ವಿಜಯಲಕ್ಷ್ಮಿ ಗ್ರೂಪ್ ನ ಕ್ರೇನ್ ಬಳಸಿ ಅಪಘಾತ ನಡೆದ ವಾಹನಗಳನ್ನು ರಸ್ತೆಯಿಂದ ಬದಿಗೆ ಸೇರಿಸಲಾಯಿತು. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ ಮೂರ್ತಿ ಹಾಗೂ ಸಿಬ್ಬಂದಿ ಭೇಟಿ ನೀಡಿದರು.

Be the first to comment on "ಬಂಟ್ವಾಳ ಸಮೀಪ ಅಪಘಾತ: ಮೆಸ್ಕಾಂ ಎಇಇ ಗಂಭೀರ ಗಾಯ"