
ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕಳೆದ ಒಂದು ವರ್ಷದ ಹಿಂದೆ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರರಾಜ್ಯ ಕಳ್ಳನೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೋಲಿಸರ ತಂಡ ಬಂಧಿಸಿದ್ದಾರೆ. ಕಣ್ಣೂರು ನಿವಾಸಿ ಮಹಮ್ಮದ್ ಅಲಕ್ಕೋಡು ಎಂಬಾತನನ್ನು ಕಾಸರಗೋಡು ಎಂಬಲ್ಲಿ ಬಂಧಿಸಲಾಗಿದೆ. ಬಂಧಿತ ಆರೋಪಿಯಿಂದ ಸುಮಾರು 4 .50 ಲಕ್ಷ ರೂ ಮೌಲ್ಯದ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ.2021 ರ ಜನವರಿ 30 ರಂದು ಅಜಿಲಮೊಗರು ನಿವಾಸಿ ಖಾದರ್ ಅವರ ಮನೆಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲಿಸರು ಕಾರ್ಯಚರಣೆ ನಡೆಸಿ ಆರೋಪಿಯನ್ನು ಕಾಸರಗೋಡಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈತನ ಮೇಲೆ ಕೇರಳ ರಾಜ್ಯದಲ್ಲಿ 200 ಕ್ಕೂ ಅಧಿಕ ಕಳವು ಪ್ರಕರಣ ದಾಖಲಾಗಿದೆ.

Be the first to comment on "ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯ ಬಂಧಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು"