ಬಂಟ್ವಾಳ: ಮಾಣಿ ಸಮೀಪ ಚಲಿಸುತ್ತಿದ್ದ ಮಾರುತಿ ಓಮ್ನಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು , ಪ್ರಯಾಣಿಕರು ಪಾರಾಗಿದ್ದಾರೆ. ದೇರಳಕಟ್ಟೆ ಮೂಲದ ಕುಟುಂಬ ಮಾಣಿ ಕಡೆಗೆ ಬರುತ್ತಿದ್ದಾಗ ಈ ಘಟನೆ ನಡೆದಿದೆ. ಕೂಡಲೇ ಸ್ಥಳೀಯರು ಆಗಮಿಸಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಅಪಾಯದ ಮುನ್ಸೂಚನೆ ಅರಿತ ಪ್ರಯಾಣಿಕರು ಕೂಡಲೇ ವಾಹನ ನಿಲ್ಲಿಸಿ ಹೊರಕ್ಕೆ ಬಂದಿದ್ದಾರೆ. ಸ್ಥಳೀಯ ಸರ್ವೀಸ್ ಸ್ಟೇಷನ್ ನಿಂದ ನೀರು ಹರಿಸಲಾಯಿತು. ಘಟನೆಯಲ್ಲಿ ವಾಹನ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…