ಬಂಟ್ವಾಳ: ಟೂಲ್ ಕಿಟ್ ಮೂಲಕ ಎಷ್ಟೇ ಅಪಪ್ರಚಾರವನ್ನು ಮಾಡಿದರೂ ಬಿಜೆಪಿ ಅಧಿಕಾರಕ್ಕೆ ಮರಳುವುದು ನಿಶ್ಚಿತ, ತನ್ನ ಸಾಧನೆಗಳ ಮೂಲಕ ಬಿಜೆಪಿ ಜನಮಾನಸದಲ್ಲಿದ್ದು, ಯಾವುದೇ ಅಪಪ್ರಚಾರಗಳು ಕಾರ್ಯಕರ್ತರನ್ನು ಧೃತಿಗೆಡಿಸುವುದಿಲ್ಲ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದ್ದಾರೆ.
ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಪಕ್ಷದ ಮಂಡಲ ಕಾರ್ಯಕಾರಿ ಸಭೆಯಲ್ಲಿ ಅವರು ಮಾತನಾಡಿದರು. ಈ ಸಂದರ್ಭ ವಿವಿಧ ಮೋರ್ಚಾಗಳ ಪ್ರಮುಖರನ್ನು ಗೌರವಿಸಲಾಯಿತು.
ಬಿಜೆಪಿ ಬಂಟ್ವಾಳ ಮಂಡಲದ ಅಧ್ಯಕ್ಷ ದೇವಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕರಾದ ಎ. ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಜಿಲ್ಲಾ ಬಿಜೆಪಿ ಪ್ರ.ಕಾರ್ಯದರ್ಶಿಗಳಾದ ಸುಧೀರ್ ಶೆಟ್ಟಿ ಕಣ್ಣೂರು, ರಾಮದಾಸ್ ಬಂಟ್ವಾಳ, ಜಿಲ್ಲಾ ಉಪಾಧ್ಯಕ್ಷರಾದ ಕೊರಗಪ್ಪ ನಾಯ್ಕ, ಹರಿಕೃಷ್ಣ ಬಂಟ್ವಾಳ ವೇದಿಕೆಯಲ್ಲಿದ್ದರು. ಬಳಿಕ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಮಂಡಲದ ಕಾರ್ಯದರ್ಶಿ ಪುರುಷೋತ್ತಮ ಶೆಟ್ಟಿ ವಾಮದಪದವು ಠರಾವು ಮಂಡಿಸಿದರು.ಬಂಟ್ವಾಳ ಮಂಡಲದ ಪ್ರ.ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ ಸ್ವಾಗತಿಸಿದರು. ಕೋಶಾಧಿಕಾರಿ ಪ್ರಕಾಶ್ ಅಂಚನ್ ವಂದಿಸಿದರು. ಇನ್ನೋರ್ವ ಪ್ರ.ಕಾರ್ಯದರ್ಶಿ ಡೊಂಬಯ ಅರಳ ಕಾರ್ಯಕ್ರಮ ನಿರೂಪಿಸಿದರು
Be the first to comment on "ಎಷ್ಟೇ ಅಪಪ್ರಚಾರ ಮಾಡಿದರೂ ಬಿಜೆಪಿ ಅಧಿಕಾರಕ್ಕೆ ನಿಶ್ಚಿತ: ಶಾಸಕ ರಾಜೇಶ್ ನಾಯ್ಕ್"