ಬಂಟ್ವಾಳ

ಎಷ್ಟೇ ಅಪಪ್ರಚಾರ ಮಾಡಿದರೂ ಬಿಜೆಪಿ ಅಧಿಕಾರಕ್ಕೆ ನಿಶ್ಚಿತ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಟೂಲ್ ಕಿಟ್ ಮೂಲಕ ಎಷ್ಟೇ ಅಪಪ್ರಚಾರವನ್ನು ಮಾಡಿದರೂ ಬಿಜೆಪಿ ಅಧಿಕಾರಕ್ಕೆ ಮರಳುವುದು ನಿಶ್ಚಿತ, ತನ್ನ ಸಾಧನೆಗಳ ಮೂಲಕ ಬಿಜೆಪಿ ಜನಮಾನಸದಲ್ಲಿದ್ದು, ಯಾವುದೇ ಅಪಪ್ರಚಾರಗಳು ಕಾರ್ಯಕರ್ತರನ್ನು ಧೃತಿಗೆಡಿಸುವುದಿಲ್ಲ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದ್ದಾರೆ.

ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಪಕ್ಷದ ಮಂಡಲ ಕಾರ್ಯಕಾರಿ ಸಭೆಯಲ್ಲಿ ಅವರು ಮಾತನಾಡಿದರು. ಈ ಸಂದರ್ಭ ವಿವಿಧ ಮೋರ್ಚಾಗಳ ಪ್ರಮುಖರನ್ನು ಗೌರವಿಸಲಾಯಿತು.

ಬಿಜೆಪಿ ಬಂಟ್ವಾಳ ಮಂಡಲದ ಅಧ್ಯಕ್ಷ ದೇವಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕರಾದ ಎ. ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಜಿಲ್ಲಾ ಬಿಜೆಪಿ ಪ್ರ.ಕಾರ್ಯದರ್ಶಿಗಳಾದ ಸುಧೀರ್ ಶೆಟ್ಟಿ ಕಣ್ಣೂರು, ರಾಮದಾಸ್ ಬಂಟ್ವಾಳ, ಜಿಲ್ಲಾ ಉಪಾಧ್ಯಕ್ಷರಾದ ಕೊರಗಪ್ಪ ನಾಯ್ಕ, ಹರಿಕೃಷ್ಣ ಬಂಟ್ವಾಳ ವೇದಿಕೆಯಲ್ಲಿದ್ದರು. ಬಳಿಕ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಮಂಡಲದ ಕಾರ್ಯದರ್ಶಿ ಪುರುಷೋತ್ತಮ ಶೆಟ್ಟಿ ವಾಮದಪದವು ಠರಾವು ಮಂಡಿಸಿದರು.ಬಂಟ್ವಾಳ ಮಂಡಲದ ಪ್ರ.ಕಾರ್ಯದರ್ಶಿ ರವೀಶ್ ಶೆಟ್ಟಿ‌ ಕರ್ಕಳ ಸ್ವಾಗತಿಸಿದರು. ಕೋಶಾಧಿಕಾರಿ ಪ್ರಕಾಶ್ ಅಂಚನ್ ವಂದಿಸಿದರು. ಇನ್ನೋರ್ವ ಪ್ರ.ಕಾರ್ಯದರ್ಶಿ ಡೊಂಬಯ ಅರಳ ಕಾರ್ಯಕ್ರಮ ನಿರೂಪಿಸಿದರು

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts