ಬಂಟ್ವಾಳ

ನಿರತ ಸಾಹಿತ್ಯ ಪ್ರಶಸ್ತಿಗೆ ಕೆ.ವಿ ಚಂದ್ರಕಲಾ ನಂದಾವರ ಆಯ್ಕೆ

ಬಂಟ್ವಾಳ: ನಿರತ ಸಾಹಿತ್ಯ ಸಂಪದ, ಕಡೆಗೋಳಿ ಬಂಟ್ವಾಳ ಇದರ ಈ ಬಾರಿಯ ಸಾಹಿತ್ಯ ಪ್ರಶಸ್ತಿಗೆ ಸಾಹಿತಿ ಕೆ.ವಿ ಚಂದ್ರಕಲಾ ನಂದಾವರ ಆಯ್ಕೆಯಾಗಿದ್ದಾರೆ.

ಸಾಹಿತ್ಯ ಕ್ಷೇತ್ರದಲ್ಲಿನ ಇವರ ವಿಶೇಷ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ನವೆಂಬರ್ 6ರಂದು ಬಿಸಿರೋಡ್‌ನ  ಕನ್ನಡ ಭವನ ಸಭಾಂಗಣದಲ್ಲಿ ನಡೆಯಲಿರುವ ನಿರತದ 25ನೇ ವರ್ಷಾಚರಣೆ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

1996ರಲ್ಲಿ ಸಮಾನ ಮನಸ್ಕ ಸಾಹಿತ್ಯಾಸಕ್ತರಿಂದ ಪ್ರಾರಂಭಗೊಂಡ ನಿರತ ಸಾಹಿತ್ಯ ಸಂಪದ ಹಲವು ಸಾಹಿತ್ಯಪರ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದ್ದು, ಸಾಹಿತ್ಯ ಕ್ಷೇತ್ರದಲ್ಲಿನ ಸಾಧನೆಗಾಗಿ ಹಲವು ದಿಗ್ಗಜರಿಗೆ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ.

ಜಾಹೀರಾತು

ಕೆ.ವಿ ಚಂದ್ರಕಲಾ ನಂದಾವರ: 1950ರಲ್ಲಿ ಜನಿಸಿದ ಇವರು ತಮ್ಮ‌ ಸ್ನಾತಕೋತ್ತರ ಶಿಕ್ಷಣದ ಬಳಿಕ ಶಿಕ್ಷಕಿ, ಉಪನ್ಯಾಸಕಿ ಹಾಗೂ ಪ್ರಾಂಶುಪಾಲೆಯಾಗಿ ಸೇವೆ ಸಲ್ಲಿಸಿ ಸದ್ಯ ನಿವೃತ್ತರಾಗಿದ್ದಾರೆ. ಸಾಹಿತ್ಯದಲ್ಲಿ ಅಪಾರ ಆಸಕ್ತಿ ಹೊಂದಿದ್ದ ಇವರು ಈ ನಡುವೆ ಹಲವಾರು ಕೃತಿ, ಕವನ ಸಂಕಲನ, ಲೇಖನ ಸಂಕಲನಗಳನ್ನು, ಅಧ್ಯಯನಾತ್ಮಕ ಕೃತಿಗಳನ್ನು  ಪ್ರಕಟಿಸಿದ್ದಾರೆ.ಸಾಹಿತ್ಯ ಕ್ಷೇತ್ರದ ಕೊಡುಗೆಗಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸಹಿತ ಹಲವು ರಾಜ್ಯಮಟ್ಟದ ಪ್ರಶಸ್ತಿಗಳು ಅರಸಿ ಬಂದಿತ್ತು.ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಇವರ ಇನ್ನೊಂದು ಕೃತಿಯು ಬಿಡುಗಡೆಗೆ ಸಿದ್ಧಗೊಂಡಿದೆ.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.