ಬಂಟ್ವಾಳ: ಜೇಸಿಐ ಬಂಟ್ವಾಳದ ವತಿಯಿಂದ ತಾಲೂಕಿನ ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಿ ಮೌನ ಸಾಧಕರೆನಿಸಿಕೊಂಡವರಿಗೆ ಜೇಸಿಐನ ಸೆಲ್ಯೂಟ್ ಟು ಸೈಲೆಂಟ್ ವರ್ಕರ್ಸ್ ಕಾರ್ಯಕ್ರಮದ ಭಾಗವಾಗಿ ಗೌರವಾರ್ಪಣೆಯ ಭಾವಸಿಂಧು ಕಾರ್ಯಕ್ರಮ ಅ. 30ರಂದು ಬೆಳಗ್ಗೆ 10ಕ್ಕೆ ಬಂಟ್ವಾಳದ ಸ್ಪರ್ಶ ಕಲಾಮಂದಿರದಲ್ಲಿ ನಡೆಯಲಿದೆ ಎಂದು ಬಂಟ್ವಾಳ ಜೇಸಿಐ ಅಧ್ಯಕ್ಷ ರೋಶನ್ ಕೆ.ರೈ ತಿಳಿಸಿದರು.
ಬಿ.ಸಿ.,ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಕಾರ್ಯಕ್ರಮದಲ್ಲಿ ಆಶಾ-ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ಸಿಬಂದಿ, ಮಾಜಿ ಯೋಧರು, ಪ್ರಗತಿಪರ ಕೃಷಿಕರು, ಸಮಾಜ ಸೇವಕರು, ಪವರ್‌ಮೆನ್‌ಗಳು ಸೇರಿದಂತೆ ಸುಮಾರು 12 ವಿಭಾಗಗಳ 100ಕ್ಕೂ ಅಧಿಕ ಮೌನ ಸಾಧಕರನ್ನು ಸನ್ಮಾನಿಸಲಿರುವುದಾಗಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಬಂಟ್ವಾಳ ಜೇಸಿಐ ಪ್ರಮುಖರಾದ ಉಮೇಶ್ ಆರ್.ಮೂಲ್ಯ, ಸದಾನಂದ ಬಂಗೇರ, ಸಂತೋಷ್ ಜೈನ್, ಕಿಶೋರ್ ಆಚಾರ್ಯ ಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to comment on "ಅ.30ರಂದು ಜೇಸಿ ಬಂಟ್ವಾಳದಿಂದ ನೂರು ಮೌನ ಸಾಧಕರಿಗೆ ಗೌರವಾರ್ಪಣೆ"