ಬಂಟ್ವಾಳ: ಬಂಟ್ವಾಳ ತಾಲೂಕು ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ವಿಟ್ಲದ ವಿಠಲ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಕೇಪು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಮಾಲತಿ, ಪಾಣೆಮಂಗಳೂರು ಶಾರದಾ ಪ್ರೌಢಶಾಲೆ ಮುಖ್ಯ ಶಿಕ್ಷಕ ಬೋಜ, ಕಾರ್ಯದರ್ಶಿಯಾಗಿ ವಿಟ್ಲ ಜೆಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಜಯರಾಮ ರೈ, ಜೊತೆ ಕಾರ್ಯದರ್ಶಿಯಾಗಿ ಮಾಣಿ ಬಾಲ ವಿಕಾಸ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ವಿಜಯ ಲಕ್ಷೀ, ಕೋಶಾಧಿಕಾರಿಯಾಗಿ ಮಂಚಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಸುಶೀಲಾ, ಸದಸ್ಯರಾಗಿ ಸಜೀಪ ಮೂಡ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಲೋಕ ನಾಯ್ಕ, ಕೊಡಂಗೆ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸುಧೀರ್, ಬಂಟ್ವಾಳ ಎಸ್ ವಿ ಎಸ್ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಸುರೇಖಾ, ಮೊಡಂಕಾಪು ದೀಪಿಕಾ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸಾಧು, ಕುಕ್ಕಾಜೆ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಮೋಹಿನಿ ಶೆಟ್ಟಿ,ಬಿ ಸಿ ರೋಡ್ ತೌಹಿದ್ ಆಂಗ್ಲ ಮಾಧ್ಯಮ ಶಾಲೆಯ ಮೆಟಿಲ್ಡಾ ಅವರು ಆಯ್ಕೆಯಾಗಿದ್ದಾರೆ.