ಬಂಟ್ವಾಳ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ೬೭ ನೇ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಏರ್ಪಡಿಸಿದ್ದ ಕೋಟಿ ಕಂಠ ಗಾಯನ ಕಾರ್ಯಕ್ರಮವು ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಬಂಟ್ವಾಳ ತಾಲೂಕು ತಹಸೀಲ್ದಾರ್ ಡಾ. ಸ್ಮಿತಾ ರಾಮು ರವರ ನೇತೃತ್ವದಲ್ಲಿ ನಡೆಯಿತು.
ಬಂಟ್ವಾಳ ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಮತ್ತು ವಿವಿಧ ಇಲಾಖೆಗಳ ಸಿಬ್ಬಂದಿಗಳು ಹಾಗೂ ಸಾರ್ವಜನಿಕರ ಸಹಯೋಗದೊಂದಿಗೆ ಪೂರ್ವಾಹ್ನ 11 ಗಂಟೆಗೆ ಸರಿಯಾಗಿ ಪ್ರಾರಂಭವಾದ ಕಾರ್ಯಕ್ರಮದಲ್ಲಿ ನಿಗದಿ ಪಡಿಸಿದ ಎಲ್ಲಾ ಆರು ಕನ್ನಡ ಗೀತೆಗಳನ್ನು ಹಾಡಲಾಯಿತು. ಕೊನೆಗೆ ಸಂಕಲ್ಪ ವಿಧಿ ಬೋಧಿಸಲಾಯಿತು.