ತುಳು ನಾಟಕ ಕಲಾವಿದರ ಒಕ್ಕೂಟದ ಬಂಟ್ವಾಳ ತಾಲೂಕು ಘಟಕ, ಕರ್ನಾಟಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಬಂಟ್ವಾಳ ಸ್ಪರ್ಶ ಕಲಾ ಮಂದಿರದಲ್ಲಿ ತುಳು ನಾಟಕೋತ್ಸವಕ್ಕೆ ಚಾಲನೆ ನೀಡಲಾಯಿತು. ಶನಿವಾರ ರಾತ್ರಿ ನಡೆದ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉದ್ಘಾಟಿಸಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ನಿಕಟಪೂರ್ವ ಅಧ್ಯಕ್ಷ ದಯಾನಂದ ಕತ್ತಲಸಾರ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಬಿ.ರಮಾನಾಥ ರೈ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅದ್ಯಕ್ಷ ಎ.ಸಿ.ಭಂಡಾರಿ, ಬಂಟ್ವಾಳ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ, ತಾಲೂಕು ಕಸಾಪ ಅಧ್ಯಕ್ಷ ವಿಶ್ವನಾಥ ಬಂಟ್ವಾಳ, ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ಅಧ್ಯಕ್ಷ ಕಿಶೋರ್ ಡಿ. ಶೆಟ್ಟಿ, ಜೇಸಿ ಬಂಟ್ವಾಳ ಅಧ್ಯಕ್ಷ ರೋಶನ್ ರೈ, ಉದ್ಯಮಿ ಲತೀಫ್ ಎಂ, ಬಂಟ್ವಾಳ ವರ್ತಕರ ಸಹಕಾರ ಸಂಘದ ಉಪಾಧ್ಯಕ್ಷ ಮಂಜುನಾಥ ರೈ ಸಾಲೆತ್ತೂರು, ಬಂಟ್ವಾಳ ತಾಲೂಕು ಶಾಮಿಯಾನ ಮಾಲೀಕರ ಸಂಘದ ಅಧ್ಯಕ್ಷ ಮಾಕ್ಸಿಂ ಸಿಕ್ವೇರ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಾಜಿ ಸದಸ್ಯ ಪಿಯೂಸ್ ಎಲ್. ರೋಡ್ರಿಗಸ್, ತುಳುಕೂಟ ಬಂಟ್ವಾಳ ಅಧ್ಯಕ್ಷ ಸುದರ್ಶನ ಜೈನ್, ಉದ್ಯಮಿ ಭಾಸ್ಕರ ಅಜೆಕಲ ಉಪಸ್ಥಿತರಿದ್ದರು. ಮಹಾಬಲ ದಾಸಕೋಡಿ ಅವರನ್ನು ಸನ್ಮಾನಿಸಲಾಯಿತು. ಪ್ರಾಸ್ತಾವಿಕವಾಗಿ ಒಕ್ಕೂಟದ ಅಧ್ಯಕ್ಷ ಸುಭಾಶ್ಚಂದ್ರ ಜೈನ್ ಮಾತನಾಡಿದರು. ಕಲಾವಿದ ಎಚ್.ಕೆ.ನಯನಾಡು ಕಾರ್ಯಕ್ರಮ ನಿರ್ವಹಿಸಿದರು. ಹಿರಿಯ ಕಲಾವಿದ ಮಂಜು ವಿಟ್ಲ ವಂದಿಸಿದರು.