ಬಂಟ್ವಾಳ

ಬಂಟ್ವಾಳದಲ್ಲಿ ತುಳು ನಾಟಕೋತ್ಸವಕ್ಕೆ ಚಾಲನೆ

ತುಳು ನಾಟಕ ಕಲಾವಿದರ ಒಕ್ಕೂಟದ ಬಂಟ್ವಾಳ ತಾಲೂಕು ಘಟಕ, ಕರ್ನಾಟಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಬಂಟ್ವಾಳ ಸ್ಪರ್ಶ ಕಲಾ ಮಂದಿರದಲ್ಲಿ ತುಳು ನಾಟಕೋತ್ಸವಕ್ಕೆ ಚಾಲನೆ ನೀಡಲಾಯಿತು. ಶನಿವಾರ ರಾತ್ರಿ ನಡೆದ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉದ್ಘಾಟಿಸಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ನಿಕಟಪೂರ್ವ ಅಧ್ಯಕ್ಷ ದಯಾನಂದ ಕತ್ತಲಸಾರ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಬಿ.ರಮಾನಾಥ ರೈ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅದ್ಯಕ್ಷ ಎ.ಸಿ.ಭಂಡಾರಿ, ಬಂಟ್ವಾಳ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ, ತಾಲೂಕು ಕಸಾಪ ಅಧ್ಯಕ್ಷ ವಿಶ್ವನಾಥ ಬಂಟ್ವಾಳ, ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ಅಧ್ಯಕ್ಷ ಕಿಶೋರ್ ಡಿ. ಶೆಟ್ಟಿ, ಜೇಸಿ ಬಂಟ್ವಾಳ ಅಧ್ಯಕ್ಷ ರೋಶನ್ ರೈ, ಉದ್ಯಮಿ ಲತೀಫ್ ಎಂ,  ಬಂಟ್ವಾಳ ವರ್ತಕರ ಸಹಕಾರ ಸಂಘದ ಉಪಾಧ್ಯಕ್ಷ ಮಂಜುನಾಥ ರೈ ಸಾಲೆತ್ತೂರು, ಬಂಟ್ವಾಳ ತಾಲೂಕು ಶಾಮಿಯಾನ ಮಾಲೀಕರ ಸಂಘದ ಅಧ್ಯಕ್ಷ ಮಾಕ್ಸಿಂ ಸಿಕ್ವೇರ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಾಜಿ ಸದಸ್ಯ ಪಿಯೂಸ್ ಎಲ್. ರೋಡ್ರಿಗಸ್, ತುಳುಕೂಟ ಬಂಟ್ವಾಳ ಅಧ್ಯಕ್ಷ ಸುದರ್ಶನ ಜೈನ್, ಉದ್ಯಮಿ ಭಾಸ್ಕರ ಅಜೆಕಲ ಉಪಸ್ಥಿತರಿದ್ದರು. ಮಹಾಬಲ ದಾಸಕೋಡಿ ಅವರನ್ನು ಸನ್ಮಾನಿಸಲಾಯಿತು. ಪ್ರಾಸ್ತಾವಿಕವಾಗಿ ಒಕ್ಕೂಟದ ಅಧ್ಯಕ್ಷ ಸುಭಾಶ್ಚಂದ್ರ ಜೈನ್ ಮಾತನಾಡಿದರು. ಕಲಾವಿದ ಎಚ್.ಕೆ.ನಯನಾಡು ಕಾರ್ಯಕ್ರಮ ನಿರ್ವಹಿಸಿದರು. ಹಿರಿಯ ಕಲಾವಿದ ಮಂಜು ವಿಟ್ಲ ವಂದಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ