



ಬಂಟ್ವಾಳ: ನಾವೂರ ಗ್ರಾಮ ಪಂಚಾಯತ್ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲುವು ಸಾಧಿಸಿದ್ದು, ಬಂಟ್ವಾಳ ಆಡಳಿತ ಸೌಧದಲ್ಲಿ ಸೋಮವಾರ ಮತ ಎಣಿಕೆ ನಡೆಯಿತು. ಉಪತಹಶೀಲ್ದಾರ್ ನವೀನ್ ಬೆಂಜನಪದವು ಅವರ ಉಪಸ್ಥಿತಿಯಲ್ಲಿ ಸಹಾಯಕ ತೋಟಗಾರಿಕಾ ಅಧಿಕಾರಿ ದಿನೇಶ್ ಅವರು ಚುನಾವಣಾ ಅಧಿಕಾರಿಯಾಗಿ, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಸುಧಾಮಣಿ ಸಹಾಯಕ ಚುನಾವಣಾ ಅಧಿಕಾರಿ ಯಾಗಿ ಚುನಾವಣಾ ಎಣಿಕೆ ಪ್ರಕ್ರಿಯೆ ನಡೆಯಿತು. ಪ್ರಥಮ ದರ್ಜೆ ಸಹಾಯಕ ನಾರಾಯಣ ಗೌಡ, ಸಿಬ್ಬಂದಿ ಗಳಾದ ಕಿರಣ್ ಹಾಗೂ ಚಂದ್ರು ಅವರು ಸಹಕರಿಸಿದರು. ಶಾಸಕ ರಾಜೇಶ್ ನಾಯ್ಕ್ ಅವರು ವಿಜೇತ ಅಭ್ಯರ್ಥಿ ಅಪ್ಪಿ ಅವರಿಗೆ ಅಭಿನಂದನೆ ಸಲ್ಲಿಸಿದರು.

ದೇವಸ್ಯಪಡೂರು ವಾರ್ಡ್ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಜ್ಯೋತಿ ನಿಧನದ ಬಳಿಕ ತೆರವಾದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 1070 ಮತಗಳ ಪೈಕಿ ಚಲಾಯಿತ 872 ಮತಗಳಲ್ಲಿ ಪೈಕಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಅಪ್ಪಿ 475 ಮತ ಪಡೆದರೆ, ಕಾಂಗ್ರೆಸ್ ಬೆಂಬಲಿತ ಸುಮಿತ್ರಾ ಮೋಹನ್ ಅವರಿಗೆ 392 ಮತ ಲಭಿಸಿದ್ದವು. 5 ಮತಗಳು ಅಸಿಂಧುವಾಗಿದ್ದವು. ಈ ಹಿನ್ನೆಲೆಯಲ್ಲಿ ವಿಜೇತೆಯನ್ನು ಅಭಿನಂದಿಸಿದ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಆಡಳಿತ ಸೌಧದಿಂದ ಬಿಜೆಪಿ ಕಚೇರಿಯವರೆಗೆ ಕಾರ್ಯಕರ್ತರ ಮೆರವಣಿಗೆ ನಡೆಯಿತು. ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಸಹಿತ ಪ್ರಮುಖರು ಇದ್ದರು.


Be the first to comment on "ಗ್ರಾಮ ಪಂಚಾಯಿತಿ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲುವು: ಶಾಸಕ ರಾಜೇಶ್ ನಾಯ್ಕ್ ಅಭಿನಂದನೆ, ಕಾರ್ಯಕರ್ತರ ಸಂಭ್ರಮಾಚರಣೆ"