ಜಕ್ರಿಬೆಟ್ಟು ಸೇತುವೆ ಸಹಿತ ಅಣೆಕಟ್ಟು ನಿರ್ಮಾಣ ಶಿಲಾನ್ಯಾಸಕ್ಕೆ ಮುಖ್ಯಮಂತ್ರಿ – ಬಂಟ್ವಾಳದಲ್ಲಿ ಶಾಸಕ ರಾಜೇಶ್ ನಾಯ್ಕ್

ಜಕ್ರಿಬೆಟ್ಟು – ನರಿಕೊಂಬು ನೇರ ಸಂಪರ್ಕ ಈ ಅಣೆಕಟ್ಟಿಂದ ಸಾಧ್ಯ

ಸುಮಾರು 135 ಕೋಟಿ ರೂ ವೆಚ್ಚದಲ್ಲಿ ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ಸೇತುವೆ ಸಹಿತ ಅಣೆಕಟ್ಟು ನಿರ್ಮಾಣದ ಪೂರ್ವಭಾವಿ ಕೆಲಸಗಳು ಆರಂಭಗೊಂಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶೀಘ್ರದಲ್ಲಿ ಇದಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ತಿಳಿಸಿದ್ದಾರೆ.

ಕಾಮಗಾರಿ ನಡೆಯುವ ಸ್ಥಳ ಪರಿಶೀಲನೆ ನಡೆಸಿದ ಸಂದರ್ಭ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ಶಿಲಾನ್ಯಾಸ ನೆರವೇರಿಸಿದ ಬಳಿಕ ಕೆಲಸಗಳು ಶೀಘ್ರವಾಗಿ ನಡೆಯಲಿದೆ. ಇದರಿಂದ ಬಹಳಷ್ಟು ಜನರಿಗೆ ಉಪಕಾರವಾಗಲಿದ್ದು, ನೀರಾವರಿಯಷ್ಟೇ ಅಲ್ಲ, ಸಂಪರ್ಕಕ್ಕೂ ಸುಲಭವಾಗಲಿದೆ. ಮಂಗಳೂರಿಗೂ ಕುಡಿಯುವ ನೀರಿನ ಸಮಸ್ಯೆ ಉಂಟಾದಾಗ ಪರ್ಯಾಯ ವ್ಯವಸ್ಥೆಯಾಗಿಯೂ ಇದು ಉಪಕಾರಿಯಾಗಲಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭ ಬುಡಾ ಅಧ್ಯಕ್ಷ ದೇವದಾಸ ಶೆಟ್ಟಿ,  ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ, ರವೀಶ್ ಶೆಟ್ಟಿ ಕರ್ಕಳ, ಪ್ರಮುಖರಾದ ಸುದರ್ಶನ ಬಜ, ಗಣೇಶ್ ರೈ ಮಾಣಿ, ಪುರುಷೋತ್ತಮ ಶೆಟ್ಟಿ ವಾಮದಪದವು, ರಮನಾಥ ರಾಯಿ ಮತ್ತಿತರರು ಉಪಸ್ಥಿತರಿದ್ದರು.

ಬಂಟ್ವಾಳನ್ಯೂಸ್ ವರದಿ

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಜಕ್ರಿಬೆಟ್ಟು ಸೇತುವೆ ಸಹಿತ ಅಣೆಕಟ್ಟು ನಿರ್ಮಾಣ ಶಿಲಾನ್ಯಾಸಕ್ಕೆ ಮುಖ್ಯಮಂತ್ರಿ – ಬಂಟ್ವಾಳದಲ್ಲಿ ಶಾಸಕ ರಾಜೇಶ್ ನಾಯ್ಕ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*