Uncategorized

ಬಂಟ್ವಾಳದಲ್ಲಿ ಎಐಟಿಯುಸಿ ಕಾರ್ಮಿಕ ಸಮಾವೇಶ

ಬಂಟ್ವಾಳನ್ಯೂಸ್



This image has an empty alt attribute; its file name is BANTWALNEWS-1.jpgThis image has an empty alt attribute; its file name is BANTWALNEWS-1.jpg
This image has an empty alt attribute; its file name is new-chennai-741x1024.jpgThis image has an empty alt attribute; its file name is new-chennai-741x1024.jpg



ಬಂಟ್ವಾಳ: ಪ್ರಸಕ್ತ ಸನ್ನಿವೇಶದಲ್ಲಿ ಕಾರ್ಮಿಕರು ರಾಜಕೀಯ ಪ್ರಜ್ಞಾವಂತರಾಗಬೇಕೆಂದು ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್(ಎಐಟಿಯುಸಿ) ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಜಯ ಭಾಸ್ಕರ್ ಡಿ.ಎ ಹೇಳಿದರು.

ಬಂಟ್ವಾಳದಲ್ಲಿ ಎಐಟಿಯುಸಿ ನೇತೃತ್ವದಲ್ಲಿ ನಡೆದ ಕಾರ್ಮಿಕ ಸಮಾವೇಶದಲ್ಲಿ ಮಾತನಾಡಿದ ಅವರು, ಕಾರ್ಮಿಕರ ಸಮಸ್ಯೆಗಳ ಬಗ್ಗೆ ಎಐಟಿಯುಸಿ ಏಕಾಂಗಿಯಾಗಿ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ವಾದ ಮಂಡಿಸುತ್ತಿದೆ ಎಂದರು.

ಅಧ್ಯಕ್ಷತೆಯನ್ನು ಎಐಟಿಯುಸಿ ಜಿಲ್ಲಾ ಉಪಾಧ್ಯಕ್ಷ, ಸಿಪಿಐ ದ.ಕ ಮತ್ತು ಉಡುಪಿ ಜಿಲ್ಲಾ ಕಾರ್ಯದರ್ಶಿ ಬಿ.ಶೇಖರ್ ವಹಿಸಿದ್ದರು. ಎಐಟಿಯುಸಿ ರಾಜ್ಯ ಮುಖಂಡ ವಿ.ಕುಕ್ಯಾನ್, ಜಿಲ್ಲಾ ಕೋಶಾಧಿಕಾರಿ ಎ.ಪ್ರಭಾಕರ ರಾವ್, ಜಿಲ್ಲಾ ಸಹ ಕಾರ್ಯದರ್ಶಿ ಸುರೇಶ್ ಕುಮಾರ್, ಭಾರತೀಯ ಮಹಿಳಾ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಭಾರತಿ ಪ್ರಶಾಂತ್ ಮಾತನಾಡಿದರು.  ಉಡುಪಿ ಜಿಲ್ಲಾ ಮುಂದಾಳು ಶಶಿಕಲಾ ಗಿರೀಶ್, ತಾಲೂಕು ಮುಖಂಡರುಗಳಾದ ಒ.ಕೃಷ್ಣ, ರಾಮ, ದೇರಣ್ಣ ಪೂಜಾರಿ ಉಪಸ್ಥಿತರಿದ್ದರು.

ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಎಸ್.ಬೇರಿಂಜ ಸ್ವಾಗತಿಸಿದರು. ಎಐಟಿಯುಸಿ ಜಿಲ್ಲಾ ಸಹಕಾರ್ಯದರ್ಶಿ ಎಂ.ಕರುಣಾಕರ ವಂದಿಸಿದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts