ಬಂಟ್ವಾಳ

ಮಂಗಳೂರಿನಲ್ಲಿ ಕನ್ನಡ ಹಬ್ಬ: ಬಂಟ್ವಾಳದಲ್ಲಿ ಪೂರ್ವಭಾವಿ ಸಭೆ

ಜಾಹೀರಾತು

ಬಂಟ್ವಾಳ: ಮಂಗಳೂರಿನಲ್ಲಿ ನವೆಂಬರ್ 19 ಮತ್ತು 20ರಂದು ನಡೆಯುವ ಕನ್ನಡ ಹಬ್ಬಕ್ಕೆ ಸಂಬಂಧಿಸಿ ಬಂಟ್ವಾಳ ತಾಲೂಕಿನ  ಸರಕಾರಿ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಎಸ್.ಡಿ.ಎಂ.ಸಿ. ಅಧ್ಯಕ್ಷರ ಪೂರ್ವಭಾವಿ ಸಭೆ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಗುರುವಾರ ಶಾಸಕ ರಾಜೇಶ್ ನಾಯ್ಕ್ ಅಧ್ಯಕ್ಷತೆಯಲ್ಲಿ ನಡೆಯಿತು.

 

ಜಾಹೀರಾತು

ಈ ಸಂದರ್ಭ ಮಾರ್ಗದರ್ಶನ ನೀಡಿದ ಕಾರ್ಯಕ್ರಮದ ಆಯೋಜಕರಲ್ಲೋರ್ವರಾದ ಜಿಪಂ ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ, ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮಾತನಾಡಿ, ಕನ್ನಡ ಭಾಷಾ ಕಲಿಕೆಗೆ ಪೂರಕವಾಗಿ ಹಾಗೂ ಕನ್ನಡ ಭಾಷಾಭಿಮಾನ ಬೆಳೆಸುವ ದೃಷ್ಟಿಯಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿ, ಬಂಟ್ವಾಳ ಕ್ಷೇತ್ರದಲ್ಲಿ ಸರಕಾರಿ ಶಾಲೆ ಅಭಿವೃದ್ಧಿಗೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು. ಸರಕಾರಿ ಶಾಲೆ ಉಳಿಸಿ ಬೆಳೆಸಿ ಆಂದೋಲನದ ರಾಜ್ಯಾಧ್ಯಕ್ಷ ಪ್ರಕಾಶ್ ಅಂಚನ್, ಜಿಲ್ಲಾ ವಿದ್ಯಾಂಗ ಇಲಾಖೆ ಅಭಿವೃದ್ಧಿ ವಿಭಾಗ ಉಪನಿರ್ದೇಶಕಿ ರಾಜಲಕ್ಷ್ಮೀ, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಕ್ಷೇತ್ರ ಸಮನ್ವಯಾಧಿಕಾರಿ ರಾಘವೇಂದ್ರ ಬಲ್ಲಾಳ್ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ