ನ.12, 13ರಂದು ಬಂಟ್ವಾಳದಲ್ಲಿ ರಾಜ್ಯಮಟ್ಟದ ಕರಾಟೆ ಸ್ಪರ್ಧೆ

ಸುದ್ದಿಗೋಷ್ಠಿ

ಜಾಹೀರಾತು

ಬಂಟ್ವಾಳ: ನವೆಂಬರ್ 12 ಮತ್ತು 13ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಎರಡು ದಿನಗಳ ಕಾಲ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಸ್ಪರ್ಧಾ ಸಮಿತಿಯ ಗೌರವಾಧ್ಯಕ್ಷ ರಾಘವೇಂದ್ರ ಭಟ್ ತಿಳಿಸಿದರು.

ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಮೊಟೊ ಶೊಟೊಕಾನ್ ಕರಾಟೆ ಅಸೋಸಿಯೇಶನ್ ಮಂಗಳೂರು, ರೋಟರಿ ಕ್ಲಬ್ ನ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಸಿದ್ಧಕಟ್ಟೆ ಫಲ್ಗುಣಿ, ಬಿ.ಸಿ.ರೋಡ್ ಸಿಟಿ ಮತ್ತು ಮೊಡಂಕಾಪು ಘಟಕಗಳ ಆಶ್ರಯದಲ್ಲಿ ಸ್ಪರ್ಧೆ ಕಟ ಮತ್ತು ಕುಮಿಟೆ ವಿಭಾಗದಲ್ಲಿ ನಡೆಯಲಿದ್ದು,  ಸುಮಾರು 1500 ಸ್ಪರ್ಧಿಗಳು ಇದರಲ್ಲಿ ಭಾಗವಹಿಸಲಿದ್ದಾರೆ ಎಂದರು. ಕರಾಟೆಯಲ್ಲಿ ಕುಬುಡೊ ಎಂಬ ಕಲೆ ಅಳಿವಿನಂಚಿಗೆ ಬಂದಿದ್ದು, ಅದನ್ನು ಉಳಿಸಲು ವಿಶೇಷವಾಗಿ ಕರಾಟೆಯ ಕುಬುಡೊ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದವರು ಮಾಹಿತಿ ನೀಡಿದರು.

ದಿ.ರಮೇಶ ಬಂಗೇರ 1996ರಲ್ಲಿ ರೋಟರಿ ಬಾಲಭವನದಲ್ಲಿ ಕರಾಟೆಯನ್ನು ಆರಂಭಿಸಿದ್ದರು ಎಂದು ನೆನಪಿಸಿದ ಅವರು, ರೋಟರಿ ಸಂಸ್ಥೆ ಈ ನಿಟ್ಟಿನಲ್ಲಿ ಕರಾಟೆಯನ್ನು ಗ್ರಾಮೀಣ ಜನರಿಗೆ ಪ್ರಯೋಜನಕಾರಿಯನ್ನಾಗಿಸುವ ಕೆಲಸವನ್ನು ಮಾಡುತ್ತಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಅಧ್ಯಕ್ಷ ಶಾಜು ಮುಲವಾನ, ಕಾರ್ಯದರ್ಶಿ ವಿಜಯ ಫೆರ್ನಾಂಡಿಸ್, ಕೋಶಾಧಿಕಾರಿ ಜೆರಾಲ್ಡ್ ಫೆರ್ನಾಂಡೀಸ್, ಜೊತೆ ಕಾರ್ಯದರ್ಶಿ ಅಶೋಕ್ ಆಚಾರ್ಯ, ಪ್ರಮುಖರಾದ ಸತೀಶ್ ಕುಮಾರ್, ಪ್ರಕಾಶ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ನ.12, 13ರಂದು ಬಂಟ್ವಾಳದಲ್ಲಿ ರಾಜ್ಯಮಟ್ಟದ ಕರಾಟೆ ಸ್ಪರ್ಧೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*