ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸರಬರಾಜು ಮತ್ತು ಲಭ್ಯತೆ ಅವ್ಯಾಹತವಾಗಿ ಸಾಗಿದ್ದು ಇದರ ಚಟಕ್ಕೆ ಬಿದ್ದಿರುವ ಯುವಕರು ಅದರ ಮತ್ತಿನಲ್ಲಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದಾರೆ. ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗಲು ಇದೇ ಪ್ರಮುಖ ಕಾರಣ. ಅದನ್ನು ತಡೆಗಟ್ಟಲು ಪೊಲೀಸ್ ಇಲಾಖೆ ಶಕ್ತಿ ಮೀರಿ ಯಾವುದೇ ಒತ್ತಡಕ್ಕೆ ಮಣಿಯದೆ ಪ್ರಯತ್ನಿಸಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾರ್ಯದರ್ಶಿ ಕಲಂದರ್ ಪರ್ತಿಪ್ಪಾಡಿ ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.
ಯುವಕನೊಬ್ಬನಿಗೆ ಪೆಟ್ರೋಲ್ ಸುರಿದು ಕೊಂದಿರುವ ಘಟನೆ ಮತ್ತು ಬಂಟ್ವಾಳದಲ್ಲಿ ಯುವಕನೋರ್ವನಿಗೆ ಚೂರಿ ಇರಿದಿರುವ ಪ್ರಕರಣಗಳಲ್ಲಿ ಮಾದಕ ದ್ರವ್ಯ ಪಾತ್ರ ಇರುವುದು ಎದ್ದು ಕಾಣುತ್ತಿದೆ. ಈ ಪ್ರಕರಣಗಳನ್ನು ಕೇವಲ ಸಾಮಾನ್ಯ ಅಪರಾಧ ಪ್ರಕರಣಗಳಾಗಿ ನೋಡದೆ ಇದಕ್ಕೆ ಮೂಲ ಕಾರಣವಾದ ಮಾದಕ ವಸ್ತುಗಳ ಬಳಕೆಯ ಬಗ್ಗೆ ಗಂಭೀರ ತನಿಖೆ ಆಗಬೇಕು ಎಂದು ಅವರು ತಮ್ಮ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ. ಪಕ್ಷವು ಮುಂದಿನ ದಿನಗಳಲ್ಲಿ ಮಾದಕ ವಸ್ತುವಿನ ವಿರುದ್ಧ ತಾಲೂಕಿನಾದ್ಯಂತ ಬೃಹತ್ ಅಭಿಯಾನವನ್ನು ನಡೆಸಲಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
Be the first to comment on "ಮಾದಕ ವಸ್ತುಗಳ ಚಟದಿಂದ ಹೆಚ್ಚುತ್ತಿದೆ ಅಪರಾಧಿ ಕೃತ್ಯ: ಕಡಿವಾಣಕ್ಕೆ ಎಸ್.ಡಿ.ಪಿ.ಐ. ಕಾರ್ಯದರ್ಶಿ ಕಲಂದರ್ ಪರ್ತಿಪ್ಪಾಡಿ ಒತ್ತಾಯ"