ಬಂಟ್ವಾಳ

ಮಾದಕ ವಸ್ತುಗಳ ಚಟದಿಂದ ಹೆಚ್ಚುತ್ತಿದೆ ಅಪರಾಧಿ ಕೃತ್ಯ: ಕಡಿವಾಣಕ್ಕೆ ಎಸ್.ಡಿ.ಪಿ.ಐ. ಕಾರ್ಯದರ್ಶಿ ಕಲಂದರ್ ಪರ್ತಿಪ್ಪಾಡಿ ಒತ್ತಾಯ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸರಬರಾಜು ಮತ್ತು ಲಭ್ಯತೆ ಅವ್ಯಾಹತವಾಗಿ ಸಾಗಿದ್ದು ಇದರ ಚಟಕ್ಕೆ ಬಿದ್ದಿರುವ ಯುವಕರು ಅದರ ಮತ್ತಿನಲ್ಲಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದಾರೆ. ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗಲು ಇದೇ ಪ್ರಮುಖ ಕಾರಣ. ಅದನ್ನು ತಡೆಗಟ್ಟಲು ಪೊಲೀಸ್ ಇಲಾಖೆ ಶಕ್ತಿ ಮೀರಿ ಯಾವುದೇ ಒತ್ತಡಕ್ಕೆ ಮಣಿಯದೆ ಪ್ರಯತ್ನಿಸಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾರ್ಯದರ್ಶಿ ಕಲಂದರ್ ಪರ್ತಿಪ್ಪಾಡಿ ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.

ಜಾಹೀರಾತು

ಕಲಂದರ್ ಪರ್ತಿಪ್ಪಾಡಿ, ಕಾರ್ಯದರ್ಶಿ, ಎಸ್.ಡಿ.ಪಿ.ಐ.

ಯುವಕನೊಬ್ಬನಿಗೆ ಪೆಟ್ರೋಲ್ ಸುರಿದು ಕೊಂದಿರುವ ಘಟನೆ ಮತ್ತು ಬಂಟ್ವಾಳದಲ್ಲಿ ಯುವಕನೋರ್ವನಿಗೆ ಚೂರಿ ಇರಿದಿರುವ ಪ್ರಕರಣಗಳಲ್ಲಿ ಮಾದಕ ದ್ರವ್ಯ ಪಾತ್ರ ಇರುವುದು ಎದ್ದು ಕಾಣುತ್ತಿದೆ. ಈ ಪ್ರಕರಣಗಳನ್ನು ಕೇವಲ ಸಾಮಾನ್ಯ ಅಪರಾಧ ಪ್ರಕರಣಗಳಾಗಿ ನೋಡದೆ ಇದಕ್ಕೆ ಮೂಲ ಕಾರಣವಾದ ಮಾದಕ ವಸ್ತುಗಳ ಬಳಕೆಯ ಬಗ್ಗೆ ಗಂಭೀರ ತನಿಖೆ ಆಗಬೇಕು ಎಂದು ಅವರು ತಮ್ಮ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ. ಪಕ್ಷವು ಮುಂದಿನ ದಿನಗಳಲ್ಲಿ ಮಾದಕ ವಸ್ತುವಿನ ವಿರುದ್ಧ ತಾಲೂಕಿನಾದ್ಯಂತ ಬೃಹತ್ ಅಭಿಯಾನವನ್ನು ನಡೆಸಲಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ