ಬಂಟ್ವಾಳ: ಕಲ್ಲಡ್ಕ ಪಂಚವಟಿ ವಾಣಿಜ್ಯ ಸಂಕೀರ್ಣದ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ಬಂಟ್ವಾಳ ತಾಳೂಕಿನ ಕಲ್ಲಡ್ಕ ಬಿಲ್ಲವ ಸಮಾಜ ಸೇವಾ ಸಂಘ ವತಿಯಿಂದ ನಡೆದ ಗುರುಪೂಜೆ, ಭಜನಾ ಸಂಕೀರ್ತನೆ ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಕರೆದಾಲ ನಾರಾಯಣಗುರು ಶಕ್ತಿಪೀಠದ ಪ್ರಣವಾನಂದ ಸ್ವಾಮೀಜಿ ಭಾಗವಹಿಸಿ ಆಶೀರ್ವಚನ ನೀಡಿದರು.
ರಾಜಕೀಯವನ್ನು ಬದಿಗಿಟ್ಟು ಸಮಾಜ ಬಾಂಧವರು ಎಲ್ಲರೂ ಒಟ್ಟಾಗಿ ಕೆಲಸ ಮಾಡುವ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಸ್ವಾಮೀಜಿ ಹೇಳಿದರು.
ಕಲ್ಲಡ್ಕ ವಲಯ ಬಿಲ್ಲವ ಸಂಘದ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಕೇಪುಳಕೋಡಿ ಅಧ್ಯಕ್ಷತೆಯಲ್ಲಿ .ಉದ್ಘಾಟನೆಯನ್ನು ಮಾಜಿ ಶಾಸಕ ಎ ರುಕ್ಮಯ ಪೂಜಾರಿ ನೆರವೇರಿಸಿದರು. ರೇಣುಕಾ ಕಣಿಯೂರು ಬ್ರಹ್ಮಶ್ರೀ ನಾರಾಯಣಗುರುಗಳ ಕುರಿತು ಉಪನ್ಯಾಸ ನೀಡಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ನಾರಾಯಣ ಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಬಿಲ್ಲವ ಸಮಾಜದ ಅಭಿವೃದ್ಧಿಗೆ ಪ್ರತ್ಯೇಕ ನಿಗಮವನ್ನು ಸರಕಾರ ಮಾಡಬೇಕೆಂದು ಒತ್ತಾಯಿಸಿದರು.
ವಿವಿಧ ಪ್ರಮುಖರಾದ ಮನೋಜ್ ಕುಮಾರ್ ಕಟ್ಟೆಮಾರ್, ಬೇಬಿ ಕುಂದರ್, , ರಾಘವ ಅಮೀನ್, ರವಿಶಂಕರ್, ಸದಾನಂದ ಪೂಜಾರಿ, ಶೋರ್ ಕುಮಾರ್ ಕಟ್ಟೆಮರ್, ಯೋಗೀಶ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು, ಸಾಧಕರ ಸನ್ಮಾನ, ವೈವಿಧ್ಯ ಕಾರ್ಯಕ್ರಮ ನಡೆದವು. ಬಿಲ್ಲವ ಸಮಾಜ ಸೇವಾ ಸಂಘ ಪ್ರಧಾನ ಕಾರ್ಯದರ್ಶಿ ರಮೇಶ್ ಪೂಜಾರಿ ಹೊಸಕಟ್ಟ ಸ್ವಾಗತಿಸಿ, ವಸಂತ ಭಟ್ಟಿಹಿತ್ಲು ಧನ್ಯವಾದ ನೀಡಿದರು. ಸಂತೋಷ್ ಕುಮಾರ್ ಬೊಲ್ಪೋಡಿ ಕಾರ್ಯಕ್ರಮ ನಿರೂಪಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…