ವಿವೇಕ ಯೋಜನೆಯಡಿ 49.2 ಲಕ್ಷ ರೂ ಅನುದಾನದಲ್ಲಿ ದಡ್ಡಲಕಾಡು ಶಾಲೆಗೆ ಮೂರು ಕೊಠಡಿ ನಿರ್ಮಾಣಕ್ಕೆ ಶಿಲಾನ್ಯಾಸ

ಬಂಟ್ವಾಳ: ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ದಡ್ಡಲಕಾಡು ಇದರ ದತ್ತು ಯೋಜನೆಯಡಿ ಸರಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ದಡ್ಡಲಕಾಡು, ಇಲ್ಲಿಗೆ ಸರಕಾರದ ವಿವೇಕ ಯೋಜನೆಯಡಿ ರೂ. 49.2 ಲ.ರೂ.ವೆಚ್ಚದ ಪ್ರೌಢಶಾಲಾ ಕೊಠಡಿ ನಿರ್ಮಾಣಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಸೋಮವಾರ ಶಿಲಾನ್ಯಾಸ ನೆರವೇರಿಸಿದರು.

ಜಾಹೀರಾತು

ಬಂಟ್ವಾಳ ಕ್ಷೇತ್ರಕ್ಕೆ ಯೋಜನೆಯಡಿ 35 ಕೊಠಡಿಗಳು ದೊರೆತಿದ್ದು ದಡ್ಡಲಕಾಡು ಶಾಲೆಗೆ 3 ಕೊಠಡಿಗಳು ಸಿಕ್ಕಿವೆ. ಎಲ್ಲವನ್ನೂ ಸರಕಾರವೇ ಮಾಡಬೇಕೆಂದು ನಾವು ಕೈಕಟ್ಟಿ ಕುಳಿತರೆ ದಡ್ಡಲಕಾಡು ಶಾಲೆ ಈ ಮಟ್ಟಕ್ಕೆ ಬೆಳೆಯುತ್ತಿರಲಿಲ್ಲ. ಶಾಲೆಗಳ ಅಭಿವೃದ್ದಿಯಲ್ಲಿ ಸರಕಾರದ ಜೊತೆ ಸಮುದಾಯದ ಸಹಕಾರವೂ ಅಗತ್ಯ.  ಪ್ರಕಾಶ್ ಅಂಚನ್ ಅವರ ದೂರದೃಷ್ಟಿಯ ಪರಿಣಾಮ ಈ ಶಾಲೆ ಉನ್ನತಮಟ್ಟಕ್ಕೆ ಬೆಳೆದು ನಿಂತಿದೆ ಎಂದರು.

ಜಾಹೀರಾತು

ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಉದ್ಯಮಿ ಸೇಸಪ್ಪ ಕೋಟ್ಯಾನ್, ಪತ್ರಕರ್ತ ವೆಂಕಟೇಶ್ ಬಂಟ್ವಾಳ ಅವರನ್ನು ಅಭಿನಂದಿಸಲಾಯಿತು.

ಜಾಹೀರಾತು

ಮುಖ್ಯ ಅತಿಥಿಗಳಾಗಿ ಪಂಜಿಕಲ್ಲು ಗ್ರಾ.ಪಂ .ಅಧ್ಯಕ್ಷ ಸಂಜೀವಪೂಜಾರಿ ಪಿಲಿಂಗಾಲು, ಬೂಡಾ ಅಧ್ಯಕ್ಷ ದೇವದಾಸ ಶೆಟ್ಟಿ, ಶಿಕ್ಷಣಾಧಿಕಾರಿ ಜ್ಞಾನೇಶ್, ಪಂಚಾಯತಿ ಉಪಾಧ್ಯಕ್ಷೆ ಜಯಶ್ರೀ, ಸದಸ್ಯರಾದ ಪೂವಪ್ಪ ಮೆಂಡನ್, ಚಿತ್ರಾಕ್ಷಿ, ರೂಪಶ್ರೀ ಸದಾನಂದ ಜನಹಿತಾಯ ಶಾಲೆಯ ಆಡಳಿತ ಸಮಿತಿಯ ಡೊಂಬಯ ಅರಳ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ತಾರಾನಾಥ ಸಾಲ್ಯಾನ್,  ಶಾಲಾಭಿವೃದ್ದಿ ಸಮಿತಿ ಉಪಾಧ್ಯಕ್ಷ ಬಾಲಕೃಷ್ಣಗೌಡ ಉಪಸ್ಥಿತರಿದ್ದರು.

ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಅಂಚನ್ ಸ್ವಾಗತಿಸಿ, ಪ್ರಾಸ್ತವಿಕ ಮಾತನಾಡಿದರು.  ಮುಖ್ಯೋಪಾಧ್ಯಾಯ ರಮಾನಂದ ನೂಜಿಪ್ಪಾಡಿ ವಂದಿಸಿದರು, ಪ್ರೌಢಶಾಲಾ ವಿಭಾಗದ ಎಸ್‌ಡಿಎಂಸಿ ಅಧ್ಯಕ್ಷ  ಪುರುಷೋತ್ತಮ ಅಂಚನ್ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ವಿವೇಕ ಯೋಜನೆಯಡಿ 49.2 ಲಕ್ಷ ರೂ ಅನುದಾನದಲ್ಲಿ ದಡ್ಡಲಕಾಡು ಶಾಲೆಗೆ ಮೂರು ಕೊಠಡಿ ನಿರ್ಮಾಣಕ್ಕೆ ಶಿಲಾನ್ಯಾಸ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*