ಬಂಟ್ವಾಳ: ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ದಡ್ಡಲಕಾಡು ಇದರ ದತ್ತು ಯೋಜನೆಯಡಿ ಸರಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ದಡ್ಡಲಕಾಡು, ಇಲ್ಲಿಗೆ ಸರಕಾರದ ವಿವೇಕ ಯೋಜನೆಯಡಿ ರೂ. 49.2 ಲ.ರೂ.ವೆಚ್ಚದ ಪ್ರೌಢಶಾಲಾ ಕೊಠಡಿ ನಿರ್ಮಾಣಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಸೋಮವಾರ ಶಿಲಾನ್ಯಾಸ ನೆರವೇರಿಸಿದರು.
ಬಂಟ್ವಾಳ ಕ್ಷೇತ್ರಕ್ಕೆ ಯೋಜನೆಯಡಿ 35 ಕೊಠಡಿಗಳು ದೊರೆತಿದ್ದು ದಡ್ಡಲಕಾಡು ಶಾಲೆಗೆ 3 ಕೊಠಡಿಗಳು ಸಿಕ್ಕಿವೆ. ಎಲ್ಲವನ್ನೂ ಸರಕಾರವೇ ಮಾಡಬೇಕೆಂದು ನಾವು ಕೈಕಟ್ಟಿ ಕುಳಿತರೆ ದಡ್ಡಲಕಾಡು ಶಾಲೆ ಈ ಮಟ್ಟಕ್ಕೆ ಬೆಳೆಯುತ್ತಿರಲಿಲ್ಲ. ಶಾಲೆಗಳ ಅಭಿವೃದ್ದಿಯಲ್ಲಿ ಸರಕಾರದ ಜೊತೆ ಸಮುದಾಯದ ಸಹಕಾರವೂ ಅಗತ್ಯ. ಪ್ರಕಾಶ್ ಅಂಚನ್ ಅವರ ದೂರದೃಷ್ಟಿಯ ಪರಿಣಾಮ ಈ ಶಾಲೆ ಉನ್ನತಮಟ್ಟಕ್ಕೆ ಬೆಳೆದು ನಿಂತಿದೆ ಎಂದರು.
ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಉದ್ಯಮಿ ಸೇಸಪ್ಪ ಕೋಟ್ಯಾನ್, ಪತ್ರಕರ್ತ ವೆಂಕಟೇಶ್ ಬಂಟ್ವಾಳ ಅವರನ್ನು ಅಭಿನಂದಿಸಲಾಯಿತು.
ಮುಖ್ಯ ಅತಿಥಿಗಳಾಗಿ ಪಂಜಿಕಲ್ಲು ಗ್ರಾ.ಪಂ .ಅಧ್ಯಕ್ಷ ಸಂಜೀವಪೂಜಾರಿ ಪಿಲಿಂಗಾಲು, ಬೂಡಾ ಅಧ್ಯಕ್ಷ ದೇವದಾಸ ಶೆಟ್ಟಿ, ಶಿಕ್ಷಣಾಧಿಕಾರಿ ಜ್ಞಾನೇಶ್, ಪಂಚಾಯತಿ ಉಪಾಧ್ಯಕ್ಷೆ ಜಯಶ್ರೀ, ಸದಸ್ಯರಾದ ಪೂವಪ್ಪ ಮೆಂಡನ್, ಚಿತ್ರಾಕ್ಷಿ, ರೂಪಶ್ರೀ ಸದಾನಂದ ಜನಹಿತಾಯ ಶಾಲೆಯ ಆಡಳಿತ ಸಮಿತಿಯ ಡೊಂಬಯ ಅರಳ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ತಾರಾನಾಥ ಸಾಲ್ಯಾನ್, ಶಾಲಾಭಿವೃದ್ದಿ ಸಮಿತಿ ಉಪಾಧ್ಯಕ್ಷ ಬಾಲಕೃಷ್ಣಗೌಡ ಉಪಸ್ಥಿತರಿದ್ದರು.
ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಅಂಚನ್ ಸ್ವಾಗತಿಸಿ, ಪ್ರಾಸ್ತವಿಕ ಮಾತನಾಡಿದರು. ಮುಖ್ಯೋಪಾಧ್ಯಾಯ ರಮಾನಂದ ನೂಜಿಪ್ಪಾಡಿ ವಂದಿಸಿದರು, ಪ್ರೌಢಶಾಲಾ ವಿಭಾಗದ ಎಸ್‌ಡಿಎಂಸಿ ಅಧ್ಯಕ್ಷ ಪುರುಷೋತ್ತಮ ಅಂಚನ್ ಕಾರ್ಯಕ್ರಮ ನಿರೂಪಿಸಿದರು.