ಬಂಟ್ವಾಳ: ದ.ಕ.ಜಿಲ್ಲಾ ಮಟ್ಟದ ಸಹಕಾರ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮ ಸೋಮವಾರ ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ವಠಾರದಲ್ಲಿ ನಡೆಯಿತು.
ಕರ್ನಾಟಕ ರಾಜ್ಯ ಮಹಾಮಂಡಳ, ಬೆಂಗಳೂರು, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿಮಿಟೆಡ್, ಮಂಗಳೂರು ಹಾಗೂ ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ ಮತ್ತು ಬಂಟ್ವಾಳ ತಾಲೂಕು ಎಲ್ಲ ಪ್ರಾಥಮಿಕ ಸಹಕಾರ ಸಂಘಗಳು ಇದರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.
ಸಿದ್ದಕಟ್ಟೆ ಸಂಘದ ಮಾಜಿ ಅಧ್ಯಕ್ಷ ಎ.ಗೋಪಿನಾಥ್ ರೈ ಧ್ವಜಾರೋಹಣ ನೆರವೇರಿಸಿದರು.ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ವಿಶ್ವಾಸದ ತಳಹದಿಯಲ್ಲಿ ಸಹಕಾರಿ ಸಂಘಗಳು ಕಾರ್ಯ ನಿರ್ವಹಿಸುತ್ತಿದ್ದು, ಸಹಕಾರ ಸಂಘಗಳ ಅಭಿವೃದ್ದಿಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದರು.
ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಟಿ.ಜಿ.ರಾಜಾರಾಮ ಭಟ್ ಅವರು ಸಹಕಾರ ಸಂಸ್ಥೆಗಳಲ್ಲಿ ವ್ಯಾಪಾರ ಸರಳೀಕರಣ ಮತ್ತು ರಫ್ತು ಅಭಿವೃದ್ಧಿಗಾಗಿ ಜೆಮ್ ಫೋರ್ಟಲ್ ಬಗ್ಗೆ ಮಾಹಿತಿ ನೀಡಿದರು.
ಸ್ಕ್ಯಾಡ್ಸ್ ಮಂಗಳೂರು ಅಧ್ಯಕ್ಷ ರವೀಂದ್ರ ಕಂಬಳಿ,ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾದ ಬಿ.ಪದ್ಮಶೇಖರ ಜೈನ್,ಸಾವಿತ್ರಿ ರೈ, ಶ್ರೀ ಕ್ಷೇತ್ರ ಪೂಂಜ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರತ್ನ ಕುಮಾರ್ ಚೌಟ, ಸಂಗಬೆಟ್ಟು ಗ್ರಾ.ಪಂ.ಅಧ್ಯಕ್ಷ ಸತೀಶ್ ಪೂಜಾರಿ ಅಲಕ್ಕೆ,ಅರಳ ಗ್ರಾ.ಪಂ.ಅಧ್ಯಕ್ಷ ಲಕ್ಷ್ಮಿ ಧರ ಶೆಟ್ಟಿ, ರಾಯಿ ಗ್ರಾ.ಪಂ.ಉಪಾಧ್ಯಕ್ಷ ರಶ್ಮಿತ್ ಶೆಟ್ಟಿ, ಕುಕ್ಕಿಪಾಡಿ ಗ್ರಾ.ಪಂ.ಉಪಾಧ್ಯಕ್ಷ ಯೋಗೀಶ್ ಆಚಾರ್ಯ, ಆರಂಬೋಡಿ ಗ್ರಾ.ಪಂ.ಅಧ್ಯಕ್ಷೆ ವಿಜಯಾ, ಸಹಕಾರಿ ಅಭಿವೃದ್ಧಿ ಅಽಕಾರಿ ಗೋಪಾಲ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ, ನಿರ್ದೇಶಕರಾದ ಸಂದೇಶ ಶೆಟ್ಟಿ ಪೊಡುಂಬ, ರಾಜೇಶ್ ಶೆಟ್ಟಿ ಕೊನೆರಬೆಟ್ಟು, ಹರೀಶ್ ಆಚಾರ್ಯ ರಾಯಿ, ಉಮೇಶ್ ಗೌಡ, ದಿನೇಶ್ ಪೂಜಾರಿ ಹುಲಿಮೇರು, ದೇವರಾಜ್ ಸಾಲ್ಯಾನ್,ಜಾರಪ್ಪ ನಾಯ್ಕ,ವೀರಪ್ಪ ಪರವ,ಅರುಣಾ ಎಸ್.ಶೆಟ್ಟಿ, ವೃತ್ತಿಪರ ನಿರ್ದೇಶಕ ಮಾಧವ ಶೆಟ್ಟಿಗಾರ್, ಕೇಂದ್ರ ಸಹಕಾರಿ ಬ್ಯಾಂಕ್ ಪ್ರತಿನಿಽ ಕೇಶವ ಕಿಣಿ, ತಾಲೂಕಿನ ವಿವಿಧ ಸಹಕಾರಿ ಸಂಘಗಳ ಅಧ್ಯಕ್ಷರು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಸಂಘದ ಸಿಬಂದಿ ವರ್ಗ ಉಪಸ್ಥಿರಿದ್ದರು.
ಈ ಸಂದರ್ಭದಲ್ಲಿ ರಾಜ್ಯೋತ್ಸದ ಪ್ರಶಸ್ತಿ ಪುರಸ್ಕೃತ ಸರಪಾಡಿ ಅಶೋಕ ಶೆಟ್ಟಿ,ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸೇಸಪ್ಪ ಕೋಟ್ಯಾನ್, ವೆಂಕಟೇಶ್ ಬಂಟ್ವಾಳ, ಡಾ. ಭಾಸ್ಕರ ರಾವ್, ಹೊನ್ನಯ ಕುಲಾಲ್ ಆರಂಬೋಡಿ, ವೆಂಕಪ್ಪ ನಲಿಕೆ, ಶ್ರೀ ಶಾರದಾ ಫ್ರೆಂಡ್ಸ್ ಸರ್ಕಲ್ ಸಜೀಪಮುನ್ನೂರು ಅವರನ್ನು ಸನ್ಮಾನಿಸಲಾಯಿತು. ಸಿದ್ದಕಟ್ಟೆ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅವರು ಸ್ವಾಗತಿಸಿ, ಪ್ರಸ್ತಾವಿಸಿದರು. ನಿರ್ದೇಶಕಿ ಮಂದಾರತಿ ಶೆಟ್ಟಿ ವಂದಿಸಿದರು.ಪ್ರಜ್ವಲ್ ಕಾರ್ಯಕ್ರಮ ನಿರೂಪಿಸಿದರು.