ಬಂಟ್ವಾಳ

ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಬಂಟ್ವಾಳ ಬಿಜೆಪಿಯಿಂದ ಹಿರಿಯ ಕಾರ್ಯಕರ್ತರ ಸಮಾವೇಶ: ಪಕ್ಷ ಬೆಳೆದು ಬಂದ ಹಾದಿ ನೆನಪಿಸಿದ ಹಿರಿಯ ನಾಯಕರು

ಜಾಹೀರಾತು

ಬಂಟ್ವಾಳ: ಬಿಜೆಪಿ ಬಂಟ್ವಾಳ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ನೇತೃತ್ವ, ಆಯೋಜನೆಯಲ್ಲಿ ಶಾಸಕರ ನಿವಾಸ ಒಡ್ಡೂರು ಫಾರ್ಮ್ಸ್ ನಲ್ಲಿ ಬಿಜೆಪಿ ಹಿರಿಯರ ಸಮಾವೇಶ ಮಂಗಳವಾರ ನಡೆಯಿತು.

ಬಿಜೆಪಿ ಬಂಟ್ವಾಳ ಕ್ಷೇತ್ರ ವ್ಯಾಪ್ತಿಯಲ್ಲಿ ಜನಸಂಘದ ಕಾಲದಿಂದಲೂ ಪಕ್ಷಕ್ಕಾಗಿ ದುಡಿದ ಹಿರಿಯರನ್ನು ಒಟ್ಟು ಸೇರಿಸಿ ನಡೆಸಿದ ಸಮಾವೇಶವಿದು. ಈ ಸಂದರ್ಭ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಿಜೆಪಿ ಹಿರಿಯ ನಾಗರಿಕ ಪ್ರಕೋಷ್ಠ ಅಧ್ಯಕ್ಷ, ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಹಿರಿಯರು ಪಕ್ಷಕ್ಕಾಗಿ ನಿಸ್ವಾರ್ಥವಾಗಿ ದುಡಿದ ಸ್ಮರಣೆಯನ್ನು ಕಿರಿಯರು ಮಾಡಬೇಕು ಪಕ್ಷ ಸಂಘಟನೆಗಾಗಿ ಹೋರಾಟ ಮಾಡಿದವರು ಇಲ್ಲಿದ್ದಾರೆ. ವ್ಯಕ್ತಿ ನಿರ್ಮಾಣದಿಂದ ರಾಷ್ಟ್ರದ ನಿರ್ಮಾಣ ಸಾಧ್ಯ  ಎಂದರು.

ಪ್ರಾಸ್ತಾವಿಕ ಮಾತುಗಳನ್ನಾಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಹಿರಿಯ ಪ್ರಕೋಷ್ಠದ ಕಾರ್ಯಕ್ರಮ ಮೂಲಕ ಎಲ್ಲ ಹಿರಿಯರನ್ನು ಗೌರವಿಸುವ ಕಾರ್ಯ ನಡೆಯುತ್ತಿದೆ ಎಂದರು.

ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ ಅನಿಸಿಕೆ ವ್ಯಕ್ತಪಡಿಸಿದರು. ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ, ಪಕ್ಷ ಪ್ರಮುಖರಾದ ನಾರಾಯಣ ಗಟ್ಟಿ, ರಾಮಕೃಷ್ಣ ಮಯ್ಯ, ಗೋಪಾಲ ಸುವರ್ಣ, ಕಮಲಾ ಪ್ರಭಾಕರ ಭಟ್, ಸುಲೋಚನಾ ಜಿ.ಕೆ. ಭಟ್, ರಾಮದಾಸ ಬಂಟ್ವಾಳ, ಕಸ್ತೂರಿ ಪಂಜ, ದೇವದಾಸ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.  ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಸ್ವಾಗತಿಸಿದರು.  ಪಕ್ಷದ ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ ಕಾರ್ಯಕ್ರಮ ನಿರ್ವಹಿಸಿದರು. ಮತ್ತೋರ್ವ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ ವಂದಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts