ಬಂಟ್ವಾಳನ್ಯೂಸ್ ವರದಿ
ಬಂಟ್ವಾಳ: ಬಂಟ್ವಾಳ ತಾಲೂಕಿನಾದ್ಯಂತ ಸಂಚರಿಸುವ ಉದ್ದೇಶದಿಂದ ಪಶು ಚಿಕಿತ್ಸೆಯ ತುರ್ತು ವಾಹನಕ್ಕೆ ಸಿದ್ಧಕಟ್ಟೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುರುವಾರ ಚಾಲನೆ ನೀಡಿದರು.
ವಿವಿಧ ಸೌಲಭ್ಯಗಳನ್ನು ಹೊಂದಿರುವ ಈ ವಾಹನ 1962 ಸಹಾಯವಾಣಿಗೆ ಕರೆ ಮಾಡಿದರೆ ಬರುತ್ತದೆ, ಇದರ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬಹುದು ಎಂದು ಈ ಸಂದರ್ಭ ಪಶು ವೈದ್ಯಾಧಿಕಾರಿ ಡಾ. ಅವಿನಾಶ್ ತಿಳಿಸಿದರು. ಈ ವೇಳೆ ಸಂಗಬೆಟ್ಟು ಗ್ರಾಪಂ ಅಧ್ಯಕ್ಷ ಸತೀಶ್ ಪೂಜಾರಿ, ಸಿದ್ಧಕಟ್ಟೆ ವ್ಯ.ಸೇ.ಸ.ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು, ಪ್ರಮುಖರಾದ ದೇವದಾಸ ಶೆಟ್ಟಿ, ಹರ್ಷಿಣಿ ಪುಷ್ಪಾನಂದ, ರಮನಾಥ ರಾಯಿ, ರತ್ನಕುಮಾರ್ ಚೌಟ, ಪುರುಷೋತ್ತಮ ಶೆಟ್ಟಿ ವಾಮದಪದವು, ರಶ್ಮಿತ್ ಶೆಟ್ಟಿ ಕೈತ್ರೋಡಿ, ಸಂತೋಷ್ ರಾಯಿಬೆಟ್ಟು ಸಹಿತ ಪ್ರಮುಖರು ಉಪಸ್ಥಿತರಿದ್ದರು.
Be the first to comment on "ಪಶುಚಿಕಿತ್ಸಾ ತುರ್ತು ವಾಹನಕ್ಕೆ ಶಾಸಕ ರಾಜೇಶ್ ನಾಯ್ಕ್ ಚಾಲನೆ"