ಬಂಟ್ವಾಳ: ನಂದಿ ದಾರುಸ್ಸಲಾಂ ವಿಶ್ವವಿದ್ಯಾಲಯದ ಪೂರ್ವ ವಿದ್ಯಾರ್ಥಿ ಸಂಘಟನೆಯಾದ ದಾರಿಮೀಸ್ ಅಸೋಸಿಯೇಷನ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ 20ನೇ ವಾರ್ಷಿಕೋತ್ಸವದ ಪ್ರಯುಕ್ತ ಶೈಖುನಾ ಶಂಸುಲ್ ಉಲಮಾರ ಆಂಡ್ ನೇರ್ಚೆ ಕಾರ್ಯಕ್ರಮವು ವಿಟ್ಲ ಸಮೀಪದ ಕೆಲಿಂಜ ಜುಮಾ ಮಸೀದಿಯ ವಠಾರದಲ್ಲಿ ನ.20ರಂದು ಬೆಳಗ್ಗೆ ಗಂಟೆ 8ರಿಂದ ಸಂಜೆ 6ರ ತನಕ ನಡೆಯಲಿದೆ ಎಂದು ಕಾರ್ಯಕ್ರಮದ ಸ್ವಾಗತ ಸಮಿತಿಯ ಉಪಾಧ್ಯಕ್ಷ ಕೆ.ಐ.ಅಬ್ದುಲ್ ಖಾದಿರ್ ದಾರಿಮಿ ಕುಕ್ಕಿಲ ಹೇಳಿದರು.
ಬಂಟ್ವಾಳ ಪ್ರಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ 30 ವರ್ಷಗಳ ಕಾಲ ಮುದರ್ರಿಸರಾಗಿ ಸೇವೆ ಸಲ್ಲಿಸುತ್ತಿರುವ ಕೆ.ಎಸ್ ಹೈದರ್ ದಾರಿಮಿ ಕರಾಯ ಅವರಿಗೆ ಶಂಸುಲ್ ಉಲಮಾ ಅವಾರ್ಡ್ ಪ್ರದಾನ ಮಾಡಲಾಗುವುದು. ಜಿಲ್ಲೆಯ ವಿವಿಧ ದರ್ಸ್ ಹಾಗೂ ಅರಬಿಕ್ ಕಾಲೇಜುಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಮುತಅಲ್ಲಿಂ ಫೆಸ್ಟ್ ನಡೆಯಲಿದೆ ಎಂದರು.
ಬೆಳಗ್ಗೆ 8 ಗಂಟೆಗೆ ಕೆಲಿಂಜ ಜುಮಾ ಮಸೀದಿಯ ಅಧ್ಯಕ್ಷ ಅಬ್ದುಲ್ ಕರೀಂ ಕಂಪದಬೈಲು ಧ್ವಜಾರೋಹಣ ಮಾಡಲಿದ್ದು, 8:30ಕ್ಕೆ ದಾರಿಮೀಸ್ ಜಿಲ್ಲಾಧ್ಯಕ್ಷ. ಕೆ.ಬಿ.ಅಬ್ದುಲ್ ಖಾದರ್ ದಾರಿಮಿ ಕೊಡುಂಗಾಯಿ ಅವರ ಅಧ್ಯಕ್ಷತೆಯಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ಅವರು ತಿಳಿಸಿದರು.
ಮಧ್ಯಾಹ್ನ ಲುಹರ್ ನಮಾಝ್ ಬಳಿಕ ಸಮಸ್ತ ಕರ್ನಾಟಕ ಮುಶಾವರದ ಕೋಶಾಧಿಕಾರಿ ಸಯ್ಯಿದ್ ಝೈನುಲ್ ಆಬೀದೀನ್ ಜಿಫ್ರೀ ತಂಙಳ್ ಬೆಳ್ತಂಗಡಿ ಅವರ ನೇತೃತ್ವದಲ್ಲಿ ಶಂಸುಲ್ ಉಲಮಾ ಮೌಲಿದ್ ನಡೆಯಲಿದ್ದು, ಸಂಜೆ 4 ಗಂಟೆಗೆ ಕಾರ್ಯಕ್ರಮದ ಸ್ವಾಗತ ಸಮಿತಿಯ ಅಧ್ಯಕ್ಷ ಒಮಾನ್ ಅಬೂಬಕರ್ ಸಿದ್ದೀಕ್ ದಾರಿಮಿ ಮೂಡಬಿದ್ರೆ ಅವರ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ ಎಂದರು.
ಸ್ವಾಗತ ಸಮಿತಿಯ ಪ್ರಮುಖರಾದ ಅಬ್ದುಲ್ ಮಜೀದ್ ದಾರಿಮಿ ಕೊಡುಂಗಾಯಿ, ಅಬ್ದುಲ್ ಕರೀಂ ದಾರಿಮಿ ಕುಂಬ್ರ, ಖಾಸಿಂ ದಾರಿಮಿ ಕಿನ್ಯ, ಅಬ್ದುಲ್ ಅಝೀಝ್ ದಾರಿಮಿ ಕೊಡಾಜೆ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
Be the first to comment on "ನ.20ರಂದು ದಾರಿಮೀಸ್ 20ನೇ ವಾರ್ಷಿಕೋತ್ಸವ ಮತ್ತು ಶಂಸುಲ್ ಉಲಮಾ ಆಂಡ್ ನೇರ್ಚೆ"