ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣಮತ್ತುಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮಂಗಳೂರು ದಕ್ಷಿಣ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಮತ್ತು ಶ್ರೀ ಭಾರತೀ ಸಮೂಹ ಸಂಸ್ಥೆ ಇವರ ಸಹಯೋಗದಲ್ಲಿ, ಮಂಗಳೂರು ವಲಯ ಪ್ರೌಢ ಶಾಲಾ ಹಾಗೂ ಮಂಗಳೂರು ತಾಲೂಕು ಪದವಿ ಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ಕ್ರೀಡಾ ಕೂಟ-2022 ದಿನಾಂಕ 03.11.2022 ಹಾಗೂ 04.11.2022ರಂದು ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು.
ಕ್ರೀಡಾಕೂಟದ ಅಧ್ಯಕ್ಷತೆಯನ್ನು ಸಂಸ್ಥೆಯ ಸೇವಾಸಮಿತಿಯ ಅಧ್ಯಕ್ಷರಾದ ಶ್ರೀ ಹಾರಕರೆ ನಾರಾಯಣ ಭಟ್ ವಹಿಸಿದ್ದರು. ಮಂಗಳೂರು ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀ ಜಯಾನಂದ ಅಂಚನ್ ಇವರು ಕ್ರೀಡಾಕೂಟದ ಉದ್ಘಾಟನೆಯನ್ನು ನಡೆಸಿಕೊಟ್ಟರು. ಕ್ರೀಡಾಕೂಟದ ಮುಖ್ಯ ಅತಿಥಿಗಳಾದ ಶ್ರೀಮತಿ ಶಕೀಲಾ ಕಾವಾ, ಕಾರ್ಪೋರೇಟರ್ ಮತ್ತು ಶ್ರೀ ಈಶ್ವರ್ ಎಚ್. ಆರ್. ಕ್ಷೇತ್ರ ಶಿಕ್ಷಣಾಧಿಕಾರಿಗಳು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಸಮಾರಂಭದ ವೇದಿಕೆಯಲ್ಲಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀಮತಿ ಲಿಲ್ಲಿ ಪಾಯಸ್, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾರ್ಯದರ್ಶಿ ಶ್ರೀ ಮೋಹನ್ ಶಿರ್ಲಾಲು, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀಮತಿ ಜಯವಂತಿ ಸೋನ್ಸ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಕುಮುದಿನಿ,ಮಂಗಳೂರು ವಲಯ ನೋಡಲ್ ಅಧಿಕಾರಿ ಸಿಲ್ವಿಯಾ ರೂತ್ ಕ್ಯಾಸ್ಟಲಿನೋ,ಗಾಣಿಗ ಸಂಘದ ಅಧ್ಯಕ್ಷರಾದ ರಾಮ ಮೊಗ್ರೋಡಿ,ಸಂಸ್ಥೆಯ ಸೇವಾ ಸಮಿತಿಯ ಕೋಶಾಧಿಕಾರಿಗಳಾದ ಶ್ರೀ ಉದಯಶಂಕರ ನೀರ್ಪಾಜೆ, ಪ್ರಾಂಶುಪಾಲೆ ಗಂಗಾರತ್ನ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಂಗಳೂರು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ನಿವೃತ್ತ ಅಧ್ಯಕ್ಷರಾದ ಶ್ರೀ ದಯಾನಂದ ಮಾಡ ಮತ್ತು ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಪ್ರತಿಮ್‌ಕುಮಾರ್ ಅವರನ್ನು ಸನ್ಮಾನಿಸಲಾಯಿತು.
ದಿನಾಂಕ 04.11.2022ರಂದು ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಜಿಲ್ಲಾ ಪ್ರಾಂಶುಪಾಲರ ಸಂಘದ ಉಪಾಧ್ಯಕ್ಷರಾದ ಶ್ರೀ ವಿಠಲ್ ಇವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಶ್ರೀ ಸುಧಾಕರ್ ಶೆಟ್ಟಿ ಮತ್ತು ರಾಜ್ಯ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಉಪಾಧ್ಯಕ್ಷರಾದ ಶ್ರೀ ಪ್ರೇಮನಾಥ ಶೆಟ್ಟಿ ಉಪಸ್ಥಿತರಿದ್ದರು.
ಈ ಸಮಾರಂಭದಲ್ಲಿ ದೈಹಿಕ ಶಿಕ್ಷಣ ಪರಿವೀಕ್ಷಕರಾದ ಶ್ರೀ ರವಿಶಂಕರ್ ನೀಲಾವರ, ತಾಲೂಕು ಕ್ರೀಡಾ ಸಂಯೋಜಕರಾದ ಶ್ರೀ ಶಶಿಧರ್ ಮಾಣಿ, ಕ್ರೀಡಾಂಗಣದ ಯುವಜನ ಕ್ರೀಡಾ ತರಬೇತುದಾರ ಶ್ರೀ ದೇವಣ್ಣ ಎನ್ ಐ ಎಸ್, ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಜಯಪ್ರಕಾಶ್ ಭಟ್ ಮತ್ತು ಶ್ರೀ ಪ್ರತಿಮ್‌ಕುಮಾರ್ ಉಪಸ್ಥಿತರಿದ್ದರು.
ಈ ಎರಡು ದಿನಗಳ ಕ್ರೀಡಾಕೂಟದ ನಿರೂಪಣೆಯನ್ನು ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ವಿನ್ಸೆಂಟ್ ಲೋಬೋ ಅವರು ನಿರ್ವಹಿಸಿದರು.
ಸಭಾಕಾರ್ಯಕ್ರಮಗಳ ನಿರೂಪಣೆಯನ್ನು ಶಿಕ್ಷಕಿ ರಶ್ಮಿ.ಎ ನಿರ್ವಹಿಸಿದರು. ಗಂಗಾರತ್ನ ಸ್ವಾಗತಿಸಿ ಪ್ರತಿಮ್‌ಕುಮಾರ್ ವಂದಿಸಿದರು.
ಕ್ರೀಡಾಕೂಟದಲ್ಲಿ ಸುಮಾರು 1450ಕ್ಕೂ ಅಧಿಕ ವಿದ್ಯಾರ್ಥಿಗಳು ಮತ್ತು ಸುಮಾರು 100ಕ್ಕೂ ಹೆಚ್ಚು ದೈಹಿಕ ಶಿಕ್ಷಣ ಶಿಕ್ಷಕರು ಭಾಗವಹಿಸಿದ್ದರು.
Be the first to comment on "ಮಂಗಳೂರು ವಲಯ ಪ್ರೌಢ ಶಾಲಾ ಹಾಗೂ ಮಂಗಳೂರು ತಾಲೂಕು ಪದವಿ ಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ಕ್ರೀಡಾ ಕೂಟ-2022"