ಬಂಟ್ವಾಳ: ಬಂಟ್ವಾಳ ತಾಲೂಕಿನ ಸರಪಾಡಿ ಜಿಪಂ ಕ್ಷೇತ್ರ ವ್ಯಾಪ್ತಿಗೆ ಒಳಪಟ್ಟಂತೆ ಅಲ್ಲಿಪಾದೆಯ ಶ್ರೀರಾಮ ಭಜನಾ ಮಂದಿರದಲ್ಲಿ ಜನಸ್ಪಂದನಾ ಸಭೆ ನಡೆಯಿತು. ಈ ಸಂದರ್ಭ ಸರಕಾರದ ವಿವಿಧ ಸವಲತ್ತುಗಳನ್ನು ಒಟ್ಟು 417 ಫಲಾನುಭವಿಗಳಿಗೆ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಬಂದ ಅರ್ಜಿಗಳಲ್ಲಿ ಒಟ್ಟು 68ನ್ನು ಸ್ಥಳದಲ್ಲೇ ವಿತರಿಸಲಾಯಿತು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಜನರ ಸಮಸ್ಯೆ ಪರಿಹಾರಕ್ಕಾಗಿ ಸ್ಥಳದಲ್ಲೇ ಅರ್ಜಿ ವಿಲೇವಾರಿ ಮಾಡಲು ಈ ಜನಸ್ಪಂದನ ಸಭೆಯನ್ನು ನಡೆಸಲಾಗುತ್ತಿದೆ ಎಂದರು. ಬಂಟ್ವಾಳ ತಹಸೀಲ್ದಾರ್ ಡಾ. ಸ್ಮಿತಾ ರಾಮು, ತಾಪಂ ಇಒ ರಾಜಣ್ಣ ಸಹಿತ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. ಗ್ರಾಪಂ ಅಧ್ಯಕ್ಷೆ ಲೀಲಾವತಿ ಅಧ್ಯಕ್ಷತೆವಹಿಸಿದ್ದರು.
ಮಣಿನಾಲ್ಕೂರು ಗ್ರಾ.ಪಂ.ಅಧ್ಯಕ್ಷೆ ನಾಗವೇಣಿ, ಉಳಿ ಗ್ರಾ.ಪಂ.ಅಧ್ಯಕ್ಷ ಸುರೇಶ್ ಮೈರಾ ವೇದಿಕೆಯಲ್ಲಿದ್ದರು. ಸರಪಾಡಿ ಗ್ರಾ.ಪಂ.ಸದಸ್ಯ ಧನಂಜಯ ಶೆಟ್ಟಿ ವಂದಿಸಿದರು. ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.