ನರಿಕೊಂಬು ಸತ್ಯಶ್ರೀ ಕಲ್ಯಾಣ ಮಂಟಪ ದಲ್ಲಿ ನಡೆದ ಗೋಳ್ತಮಜಲು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮ ಶುಕ್ರವಾರ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್, ತಾಲೂಕಿನ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಜನಸ್ಪಂದನಾ ಕಾರ್ಯಕ್ರಮವನ್ನು ಗ್ರಾಮ ಮಟ್ಟದಲ್ಲಿ ಆಯೋಜಿಸಲಾಗಿದ್ದು, ಬಹುತೇಕ ಎಲ್ಲಾ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಲು ಪ್ರಯತ್ನಿಸಲಾಗುವುದು, ಎಲ್ಲ ಜನಸ್ಪಂದನ ಸಭೆಗಳ ಬಳಿಕ ಜಿಲ್ಲಾಧಿಕಾರಿ ಉಪಸ್ಥಿತಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ 408 ಮಂದಿಗೆ ತಾಲೂಕಿನ ವಿವಿಧ ಇಲಾಖೆಯಿಂದ ಸಿಗುವ ಯೋಜನೆಗಳನ್ನು ಫಲಾನುಭವಿಗಳಿಗೆ ವಿತರಣೆ ಮಾಡಲಾಯಿತು. ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿನುತಾ ಪುರುಷೋತ್ತಮ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ತಹಸೀಲ್ದಾರ್ ಡಾ. ಸ್ಮಿತಾ ರಾಮು, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಹಿರಣ್ಮಯಿ, ಗೋಳ್ತಮಜಲು ಗ್ರಾ.ಪಂ.ಅಧ್ಯಕ್ಷ ಅಭಿಷೇಕ್ ಶೆಟ್ಟಿ, ಕಡೇಶಿವಾಲಯ ಗ್ರಾ.ಪಂ.ಅಧ್ಯಕ್ಷ ಸುರೇಶ್ ಬನಾರಿ, ಬರಿಮಾರು ಗ್ರಾ.ಪಂ.ಅಧ್ಯಕ್ಷೆ ಶಶಿಕಲಾ, ವಿವಿಧ ಇಲಾಖಾಧಿಕಾರಿಗಳು, ಉಪತಹಸೀಲ್ದಾರ್ ನವೀನ್ ಬೆಂಜನಪದವು, ದಿವಾಕರ ಮುಗುಳಿಯ, ಕಂದಾಯ ನಿರೀಕ್ಷಕರಾದ ವಿಜಯ ಆರ್, ಪ್ರಥಮ ದರ್ಜೆ ಸಹಾಯಕಿ ಗ್ರೆಟ್ಟಾ ಮಸ್ಕರೇನಸ್, ಗ್ರಾಮ ಲೆಕ್ಕಾಧಿಕಾರಿ ನಾಗರಾಜ್ ಹಾಗೂ
ಯಶ್ವಿತ ಉಪಸ್ಥಿತರಿದ್ದರು. ತಾ.ಪಂ.ಇ.ಒ.ರಾಜಣ್ದ ಸ್ವಾಗತಿಸಿ, ಶಿವು ಬಿರಾದರ್ ವಂದಿಸಿದರು. ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.
Be the first to comment on "ತಾಲೂಕಿನ ಜನಸ್ಪಂದನೆ ಸಭೆಗಳ ಬಳಿಕ ಜಿಲ್ಲಾಧಿಕಾರಿ ಸಹಿತ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ: ಶಾಸಕ ರಾಜೇಶ್ ನಾಯ್ಕ್"