ಬಂಟ್ವಾಳ: ಕೊರೊನಾ ಆವರಿಸಿದ ಸಂದರ್ಭ ನಿರ್ಮೂಲನೆ ಮಾಡುವ ಕಾರ್ಯದಲ್ಲಿ ಸಹಕರಿಸಿದ ಆರೋಗ್ಯ, ಅಂಗನವಾಡಿ ಕಾರ್ಯಕರ್ತೆಯರ ಸಮ್ಮಿಲನ ಕಾರ್ಯಕ್ರಮ ಒಡ್ಡೂರು ಫಾರ್ಮ್ಸ್ ನಲ್ಲಿ ಭಾನುವಾರ ನಡೆಯಿತು.
ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಮಾತನಾಡಿ, ಕೊರೊನಾ ವಿರುದ್ಧ ಸೇವೆ ಮಾಡಿದವರನ್ನು ಗುರುತಿಸಿ ಗೌರವಿಸುವ ಶಾಸಕರ ಕಾರ್ಯ ಪ್ರೇರಣಾದಾಯಿ ಎಂದರು.
ಈ ಸಂದರ್ಭ ಮಾತನಾಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಕೊರೊನಾ ಸಂದರ್ಭ ಕಷ್ಟಕಾಲದಲ್ಲಿ ಬೀದಿಗಿಳಿದು ಜನರ ಆರೋಗ್ಯ ಕಾಪಾಡುವಲ್ಲಿ ಸಹಕರಿಸಿದ ಆರೋಗ್ಯ ಇಲಾಖೆ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯವಾದದು ಎಂದರು.
ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್, ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಸಹಾಯಕ ಕಮಿಷನರ್ ಮದನ್ ಮೋಹನ್, ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿ ರಶ್ಮಿ ಎಸ್. ಆರ್, ತಾಲೂಕು ಆರೋಗ್ಯಾಧಿಕಾರಿ ಡಾ.ಅಶೋಕ್ ಕುಮಾರ್, ವೈದ್ಯರಾದ ಡಾ.ಜಗದೀಶ್, ವಿಟ್ಲ ಸಿಡಿಪಿಒ ಉಷಾ, ಸಹಾಯಕ ಸಿಡಿಪಿಒ ಶೀಲಾವತಿ, ಉಪಸ್ಥಿತರಿದ್ದರು. ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.
Be the first to comment on "ಕೋವಿಡ್ ವಾರಿಯರ್ಸ್ ಗಳಾದ ಬಂಟ್ವಾಳ ಆರೋಗ್ಯ ಸಹಾಯಕಿಯರು, ಅಂಗನವಾಡಿ ಕಾರ್ಯಕರ್ತೆಯರ ಸಮ್ಮಿಲನ"