ಬಂಟ್ವಾಳ

ಬದನಡಿ: ಶ್ರೀ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನ: ವಾರ್ಷಿಕ ಷಷ್ಠಿ ಮಹೋತ್ಸವ

ಇಲ್ಲಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾಷರ್ಿಕ ಷಷ್ಠಿ ಮಹೋತ್ಸವ ಮತ್ತು ದೇವರ ಬಲಿ ಉತ್ಸವ ಮಂಗಳವಾರ ನಡೆಯಿತು. ಕ್ಷೇತ್ರದ ತಂತ್ರಿ ನಡ್ವಂತಾಡಿ ಶ್ರೀಪಾದ ಪಾಂಗಣ್ಣಾಯರ ನೇತೃತ್ವದಲ್ಲಿ ದೇವರಿಗೆ ಪವಮಾನ ಅಭಿಷೇಕ, ನವಕ ಕಲಶಾಭೀಷೇಕ, ಸ್ಕಂದಯಾಗ, ಸಾಮೂಹಿಕ ಆಶ್ಲೇಷ ಬಲಿ, ಬ್ರಹ್ಮಲಿಂಗೇಶ್ವರ ದೇವರಿಗೆ ಏಕಾದಶ ರುದ್ರಾಭಿಷೇಕ ನೆರವೇರಿತು. ಇದೇ ವೇಳೆ ದೇವರ ಪಲ್ಲಕಿ ಉತ್ಸವ ಭಜನೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆಯಲ್ಲಿ ಸಾವಿರಾರು ಮಂದಿ ಭಕ್ತರು ಪಾಲ್ಗೊಂಡರು.

ಜಾಹೀರಾತು

ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ, ಅನುವಂಶಿಕ ಮೊಕ್ತೇಸರ ಕೆ.ಸುಂದರ ರಾವ್, ಜೀಣರ್ೋದ್ಧಾರ ಸಮಿತಿ ಅಧ್ಯಕ್ಷ ದುಗರ್ಾದಾಸ್ ಶೆಟ್ಟಿ ಕರೆಂಕಿಜೆ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ, ಸದಸ್ಯರಾದ ರಾಜೇಶ ಗೋವಿಂದಬೆಟ್ಟು, ಶರತ್ ಕುಮಾರ್ ಕೊಯಿಲ, ಆನಂದ ಬುರಾಲು, ಲೋಕೇಶ ಕೈತ್ರೋಡಿ, ನಳಿನಿ ಬದನಡಿ, ಯಮುನಾ ಕೈತ್ರೋಡಿ, ಪ್ರಮುಖರಾದ ರಾಜೇಶ ಶೆಟ್ಟಿ ಸೀತಾಳ, ರಮಾನಾಥ ರಾಯಿ, ಪ್ರಭಾಕರ ಪ್ರಭು, ಪ್ರಕಾಶ ಜೈನ್ ಬೊಲ್ಲೋಡಿ, ರಾಮಚಂದ್ರ ಶೆಟ್ಟಿಗಾರ್, ದೇವಪ್ಪ ಕುಲಾಲ್, ಮೋಹನ್ ಕೆ.ಶ್ರೀಯಾನ್, ಹರೀಶ ಆಚಾರ್ಯ ರಾಯಿ, ಬಿ.ದಯಾನಂದ ಸಪಲ್ಯ, ದಿನೇಶ ಸುವರ್ಣ, ಸಂದೇಶ ಮಡಿವಾಳ, ಅರ್ಚಕ ನಾಗೇಶ ರಾವ್ ಮತ್ತಿತರರು ಇದ್ದರು. ಸಂಜೆ ಭಜನೆ, ರಂಗಪೂಜೆ, ದುಗರ್ಾ ನಮಸ್ಕಾರ, ರಾತ್ರಿ ಪರಿವಾರ ದೈವ ಮೈಸಂದಾಯ, ರಕ್ತೇಶ್ವರಿ, ಕಲ್ಲುಟರ್ಿ, ಅಣ್ಣಪ್ಪ ಪಂಜುಲರ್ಿ ದೈವಗಳಿಗೆ ನೇಮೋತ್ಸವ ನಡೆಯಿತು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.