ಬಂಟ್ವಾಳ: ಸಜಿಪಮುನ್ನೂರು ಗ್ರಾಮದ ಮುಗುಳ್ಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.28 ಮತ್ತು 29ರಂದು ಪಂಚಮಿ ಮತ್ತು ಷಷ್ಠಿ ಮಹೋತ್ಸವ ಕಾರ್ಯಕ್ರಮಗಳು ನಡೆದವು. ಇದೇ ಸಂದರ್ಭ ವಾರ್ಷಿಕ ಜಾತ್ರಾ ಮಹೋತ್ಸವವೂ ನಡೆದಿದ್ದು, ಸುಮಾರು 2 ಸಾವಿರದಷ್ಟು ಭಕ್ತರು ಆಗಮಿಸಿದರು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಆಗಮಿಸಿ, ದೇವರ ದರ್ಶನ ಪಡೆದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯಶಂಕರ ಬಾಸ್ರಿತ್ತಾಯ, ಸಜಿಪಮಾಗಣೆ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್ ಸಹಿತ ಪ್ರಮುಖರು ಈ ಸಂದರ್ಭ ಉಪಸ್ಥಿತರಿದ್ದರು.