ಹಿಟ್ & ರನ್ ಪ್ರಕರಣದಲ್ಲಿ ಪಲ್ಟಿಯಾದ ಆಟೊ: ಚಾಲಕ ಮತ್ತು ಪ್ರಯಾಣಿಕರಿಗೆ ಗಾಯ

ಬಂಟ್ವಾಳ: ಸೋಮವಾರ ಬೆಳಗ್ಗೆ ಬ್ರಹ್ಮರಕೂಟ್ಲು ಸಮೀಪ ತಲಪಾಡಿ ಎಂಬಲ್ಲಿ ಹಿಟ್ ಅಂಡ್ ರನ್ ಪ್ರಕರಣವೊಂದರಲ್ಲಿ ಆಟೊವೊಂದು ಪಲ್ಟಿಯಾದ ಕುರಿತು ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಆಟೊ ಚಾಲಕ ಮೂಡನಡುಗೋಡು ನಿವಾಸಿ ಪುರುಷೋತ್ತಮ (45) ಮತ್ತು ಪ್ರಯಾಣಿಕರಾದ ಹೃತಿಕ್ ಗಾಯಗೊಂಡಿದ್ದಾರೆ.

ಜಾಹೀರಾತು

ಪ್ರಯಾಣಿಕರಾದ ಹೃತಿಕ ಎಂಬವರನ್ನು ಕರೆದುಕೊಂಡು ಮಂಗಳೂರು ಕಡೆಗೆ ಹೋಗುತ್ತಿದ್ದ ಸಂದರ್ಭ ಬೆಳಿಗ್ಗೆ 8 ಗಂಟೆಗೆ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ತಲಪಾಡಿ ಬಸ್ಸ್ ನಿಲ್ದಾಣದ ಬಳಿ ತಲುಪಿದಾಗ ಹಿಂದಿನಿಂದ ಅಂದರೆ ಬಿ ಸಿ ರೋಡು ಕಡೆಯಿಂದ ಕಾರೊಂದನ್ನು ಅದರ ಚಾಲಕ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಹೋಗಿ ಆಟೋರಿಕ್ಷಾ ಹಿಂಬದಿಗೆ ಡಿಕ್ಕಿ ಹೊಡೆದು ಅಪಘಾತಪಡಿಸಿದ್ದು ಪರಿಣಾಮ ಆಟೋರಿಕ್ಷಾ ಚಾಲಕ ಪುರುಷೋತ್ತಮ್ ಅವರಿಗೆ ಹಣೆಗೆ, ಎಡ ಭಾಗ ಕೆನ್ನೆಗೆ, ಗಲ್ಲಕ್ಕೆ, ಮೆಲ್ತುಟಿಗೆ, ಬಲಭಾಗ ಭುಜಕ್ಕೆ ಗುದ್ದಿದ ಗಾಯ ಮತ್ತು ತರಚಿರ ಗಾಯ ಹಾಗೂ ಪ್ರಯಾಣಿಕರಾದ ಹೃತಿಕ ಎಂಬವರಿಗೆ ಹಿಂಬದಿ ತಲೆಗೆ ಗುದ್ದಿದ ರಕ್ತ ಗಾಯ, ಬಲ ಮತ್ತು ಎಡ ಕೈಗಳಲ್ಲಿ ತರಚಿದ ಗಾಯವಾಗಿದ್ದು ಬಳಿಕ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಇಬ್ಬರು ಒಳ ರೋಗಿಯಾಗಿ ದಾಖಲಿಸಲಾಯಿತು. ಅಪಘಾತಪಡಿಸಿದ ಕಾರು ಚಾಲಕ ಕಾರು ನಿಲ್ಲಿಸದೆ ಪರಾರಿಯಾಗಿರುವುದಾಗಿ ಬಂಟ್ವಾಳ ಸಂಚಾರ ಪೊಲೀಸ್ ಠಾಣೆ ಅ.ಕ್ರ 152/2022 ಕಲಂ: 279, 337, ಐಪಿಸಿ 134 (ಎ ಮತ್ತು ಬಿ),187 ಐ ಎಮ್ ವಿ ಯಂತೆ ಪ್ರಕರಣ ದಾಖಲಾಗಿದೆ.

 

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಹಿಟ್ & ರನ್ ಪ್ರಕರಣದಲ್ಲಿ ಪಲ್ಟಿಯಾದ ಆಟೊ: ಚಾಲಕ ಮತ್ತು ಪ್ರಯಾಣಿಕರಿಗೆ ಗಾಯ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*