ಸಮಾಜದ ಮೇಲೆ ನಡೆಯುವ ಆಕ್ರಮಣಗಳನ್ನು ತಡೆಗಟ್ಟಿ ಭವ್ಯ ಭಾರತ ನಿರ್ಮಾಣಕ್ಕೆ ಪಣತೊಡಬೇಕು ಎಂದು ಹಿಂದೂ ಜಾಗರಣಾ ವೇದಿಕೆ ರಾಜ್ಯ ಗೌರವಾಧ್ಯಕ್ಷರೂ ಆಗಿರುವಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹೇಳಿದರು.
ಅಯೋಧ್ಯೆ ಶ್ರೀರಾಮಜನ್ಮಸ್ಥಾನ ಮುಕ್ತಿ ಆಂದೋಲನ ವಿಜಯೋತ್ಸವ ಅಂಗವಾಗಿ ಬಂಟ್ವಾಳ ತಾಲೂಕು ಹಿಂದು ಜಾಗರಣಾ ವೇದಿಕೆಯ ವತಿಯಿಂದ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನದಲ್ಲಿ ನಡೆದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಸಂದರ್ಭ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು.
ಅಧ್ಯಕ್ಷತೆಯನ್ನು ಜ್ಯೋತಿಷಿ ವೆಂಕಟ್ರಮಣ ಮುಚ್ಚಿನ್ನಾಯ ವಹಿಸಿದ್ದರು. ಹಿಂಜಾವೇ ಪ್ರಾಂತ ಸಂಚಾಲಕ ದೋ.ಕೇಶವಮೂರ್ತಿ ದಿಕ್ಸೂಚಿ ಭಾಷಣ ಮಾಡಿದರು. ಹಿಂಜಾವೇ ಪುತ್ತೂರು ಜಿಲ್ಲಾಧ್ಯಕ್ಷ ಜಗದೀಶ ನೆತ್ತರಕೆರೆ, ಪ್ರಾಂತ ಪ್ರಮುಖ ರವಿರಾಜ್ ಬಿ.ಸಿ.ರೋಡ್, ಜಿಲ್ಲಾ ಸಹಸಂಚಾಲಕ ನರಸಿಂಹ ಮಾಣಿ, ತಾಲೂಕು ಸಹಸಂಚಾಲಕ ಸಂತೋಷ್ ಮತ್ತಿತರರು ಉಪಸ್ಥಿತರಿದ್ದರು. ಈ ಸಂದರ್ಭ ಅಧ್ಯಕ್ಷ ತಿರುಲೇಶ್ ಬೆಳ್ಳೂರು ಸ್ವಾಗತಿಸಿದರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)